More

    ಕೋರ್ಟ್ ಸಂಕೀರ್ಣ ನಿರ್ಮಾಣಕ್ಕೆ ಅಡಿಗಲ್ಲು ಶೀಘ್ರ

    ಚಿಕ್ಕೋಡಿ ಗ್ರಾಮೀಣ, ಬೆಳಗಾವಿ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ವಾದ ಮಂಡಿಸಿದ್ದ ಚಿಕ್ಕೋಡಿಯ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ನ್ಯಾಯಾಲಯದ ಆವರಣದಲ್ಲಿ 32 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ನ್ಯಾಯಾಲಯಗಳ ಸಂಕೀರ್ಣ ನೂತನ ಕಟ್ಟಡದ ಅಡಿಗಲ್ಲು ಸಮಾರಂಭವನ್ನು ಶೀಘ್ರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.
    ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣ ಜಾಗ ಪರಿಶೀಲಿಸಿ ಬಳಿಕ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಅನೇಕ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದರು.

    ಪಟ್ಟಣದಲ್ಲಿ 195 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ನ್ಯಾಯಾಲಯದಲ್ಲಿ ಐದು ವರ್ಷಗಳ ಹಿಂದೆಯಷ್ಟೇ 7ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಬಾರ್ ಅಸೋಸಿಯೇಷನ್ ಪದಾಧಿಕಾರಿಗಳು ಮುತುವರ್ಜಿ ವಹಿಸಿ ಹೊಸ ಕಟ್ಟಡ ನಿರ್ಮಿಸಿಕೊಳ್ಳಬೇಕು ಎಂದರು.

    ಜಿಲ್ಲಾ ನ್ಯಾಯಾಧೀಶ ಎಸ್.ಎಲ್.ಚವ್ಹಾಣ, ಉಪವಿಭಾಗಾಧಿಕಾರಿ ಮಾಧವ ಗಿತ್ತೆ, ತಹಸೀಲ್ದಾರ್ ಚಿದಂಬರ ಕುಲಕರ್ಣಿ, ಲೋಕೋಪಯೋಗಿ ಇಲಾಖೆಯ ಇಇ ವಿ.ಎನ್.ಪಾಟೀಲ, ಎಇಇ ಭರತ ಬೆಡಕಿಹಾಳೆ, ವಕೀಲರ ಪರಿಷತ್ ಸದಸ್ಯ ಕಲ್ಮೇಶ ಕಿವಡ, ವಕೀಲರ ಸಂಘದ ಅಧ್ಯಕ್ಷ ನಾಗೇಶ ಕಿವಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts