More

    ಕೋವಿಡ್​ ತಪಾಸಣೆ ಹೆಚ್ಚಿಸಲಿ: ಶೋಭಾ ಸೋಮನಾಚೆ ಸೂಚನೆ

    ಬೆಳಗಾವಿ: ರಾಜ್ಯದಲ್ಲಿ ಕೋವಿಡ್​&19 ಹೊಸ ಉಪ ತಳಿಯ ವೈರಾಣು ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ನೆರೆಯ ರಾಜ್ಯಗಳಿಂದ ಬರುವವರಿಗೆ ಪರೀಾ ಪ್ರಮಾಣ ಹೆಚ್ಚಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಹಾನಗರ ಪಾಲಿಕೆ ಮೇಯರ್​ ಶೋಭಾ ಸೋಮನಾಚೆ ಸೂಚನೆ ನೀಡಿದರು.

    ನಗರದ ಪಾಲಿಕೆಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆರೋಗ್ಯ ಸ್ಥಾಯಿ ಸಮಿತಿ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್​&19 ಹೊಸ ಉಪ ತಳಿಯು ಸಾರ್ವಜನಿಕ ವಲಯದಲ್ಲಿ ಕಂಡುಬಂದಿದ್ದು, ಜನರು ಆತಂಕ್ಕೆ ಒಳಗಾಗಿದ್ದಾರೆ. ವೈರಾಣು ಕುರಿತು ಸಾರ್ವಜನಿಕರು ಭಯಪಡುವ ಅವಶ್ಯಕತೆ ಇಲ್ಲ. ನೆಗಡಿ, ಕೆಮ್ಮು ಇತರೆ ಲಕ್ಷಣಗಳು ಕಂಡು ಬಂದರೆ ಕೂಡಲೆ ಹತ್ತಿರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಸಿಕೊಳ್ಳಬೇಕು ಎಂದು ನಾಗರಿಕರಲ್ಲಿ ವಿನಂತಿಸಿದರು.

    ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮಹೇಶ ಕೋಣಿ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್​ ಸಜ್ಜುಗೊಳಿಸಲಾಗುತ್ತಿದೆ. ಕೋವಿಡ್​ ಲಕ್ಷಣಗಳು ಕಂಡುಬಂದರೆ ಸಮೀಪದ ಯಾವುದೇ ಆಸ್ಪತ್ರೆಗೆ ಭೇಟಿ ನೀಡಿದರೂ ಪರೀೆ ಮಾಡಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸದ್ಯ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದರು. ಉಪಮೇಯರ್​ ರೇಷ್ಮಾ ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷರಾದ ವೀಣಾ ಬಿಜಾಪುರೆ, ರವಿ ದೋತ್ರೆ, ಸದಸ್ಯರಾದ ಹನುಮಂತ ಕೊಂಗಾಲಿ, ರಾಜಶೇಖರ ಡೋಣಿ, ಶ್ರೀಶೈಲ ಕಾಂಬಳೆ, ವಿಠ್ಠಲ ಶಿಂಧೆ, ವೈದ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ, ಡಾ.ಸಂಜೀವ ನಾಂದ್ರೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts