More

    ಕ್ರೀಡಾಕೂಟಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ


    ಯಾದಗಿರಿ: ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಕಾರಿ ಸ್ನೇಹಲ್ ಆರ್., ಸೂಚಿಸಿದ್ದಾರೆ.

    ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.31, 01 ರಂದು ಎರಡು ದಿನಗಳ ಕಾಲ ಪಂದ್ಯಾವಳಿ ಆಯೋಜಿಸಲಾಗುತ್ತಿದೆ. ಕ್ರೀಡೆಗಳು ಜತೆಗೆ ಸಾಂಸ್ಕೃತಿಕ ಸ್ಪರ್ಧೆಗಳು ಸಹ ಜರುಗಲಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಕ್ರೀಡಾಂಗಣದಲ್ಲಿ ಎರಡು ದಿನ ಆಂಬುಲೆನ್ಸ್, ವೈದ್ಯಕೀಯ ಸಿಬ್ಬಂದಿ, ನೈರ್ಮಲ್ಯ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ನಿದರ್ೇಶನ ನೀಡಿದರು.

    ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಗುಂಪು ಹಾಗೂ ವೈಯಕ್ತಿಕ ಸ್ಪರ್ಧೆಗಳು ನಡೆಯಲಿವೆ ಅಥ್ಲೆಟಿಕ್ಸ್, ಕುಸ್ತಿ, ಕಬಡ್ಡಿ, ಫುಟ್ಬಾಲ್, ವಾಲಿಬಾಲ್, ಹಾಕಿ, ಟೆಬಲ್ ಟೆನಿಸ್, ಟೆನಿಸ್, ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬ್ಯಾಸ್ಕೆಟ್ ಬಾಲ್, ಚೆಸ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಭಾರ ಎತ್ತುವ ಸ್ಪಧರ್ೆ, ಓಟ, ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ ಎಂದರು.

    ಕ್ರಿಕೆಟ್ ಕ್ರೀಡೆಯಲ್ಲಿ ಲೆದರ್ ಬಾಲ್ ಮಾತ್ರ ಬಳಸಿ ಆಟವಾಡಲು ಅವಕಾಶ ನೀಡಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಿಂದೂಸ್ತಾನಿ ಸಂಗೀತ, ಲಘು ಶಾಸ್ತ್ರೀಯ ಸಂಗೀತ, ಕನರ್ಾಟಕ ಶಾಸ್ತ್ರೀಯ ಸಂಗೀತ, ಕನರ್ಾಟಕ ಲಘು ಸಂಗೀತ, ಜಾನಪದ ಗೀತೆ, ಭರತ ನಾಟ್ಯ, ಜಾನಪದ ನೃತ್ಯ ಸೇರಿದಂತೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕ್ರೀಡಾಪಟುಗಳಿಗೆ ಬೆಳಿಗ್ಗೆ ಉಪಾಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಿ, ಕ್ರೀಡಾಂಗಣದಲ್ಲಿ ಮೈದಾನಕ್ಕೆ ನೀರು ಸಿಂಪಡಣೆ, ಅಗತ್ಯ ಸ್ವಚ್ಚತಾ ಕಾರ್ಯಗಳಿಗಾಗಿ ಸಿಬ್ಬಂದಿ ನಿಯೋಜಿಸಬೇಕು ಎಂದು ತಿಳಿಸಿದರು.

    ಡಿಡಿಪಿಐ ಶಾಂತಗೌಡ ಪಾಟೀಲ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ, ಕ್ರೀಡಾ ಇಲಾಖೆ ರಾಜು ಬಾವಿಹಳ್ಳಿ, , ಹಿಂದುಳಿದ ವರ್ಗಗಳ ಕಲ್ಯಾಣಾಕಾರಿ ರಾಘವೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ಉತ್ತರಾದೇವಿ, ಸಂಘದ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಕರೇಟಿಗಿ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ಆರ್.ಎಂ.ನಾಟೀಕರ್, ಸಂತೋಷಕುಮಾರ ನೀರಟಿ, ಸಂಜೀವ್ ದರಬಾರಿ, ಮಲ್ಲೇಶಪ್ಪ ಹೊಸಮನಿ, ಗೋಪಿ ಚಂದ್ ಚವ್ಹಾಣ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts