More

    ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಒತ್ತಡ ದೂರವಾಗುತ್ತವೆ

    ಚಿಕ್ಕಬಳ್ಳಾಪುರ : ಕ್ರೀಡಾಕೂಟಗಳಲ್ಲಿ ನಿರಂತರವಾಗಿ ಭಾಗವಹಿಸುವುದರಿಂದ ಒತ್ತಡಗಳು ದೂರವಾಗುತ್ತವೆ ಎಂದು ಜಿ.ಪಂ.ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ ಅಭಿಪ್ರಾಯಪಟ್ಟರು.
    ನಗರದ ಸರ್ ಎಂ.ವಿ.ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.
    ಕ್ರೀಡೆಗಳಲ್ಲಿ ಪ್ರತಿಯೊಬ್ಬರು ಕೀಳರಿಮೆಯನ್ನು ಬಿಟ್ಟು ಭಾಗವಹಿಸಬೇಕು. ಸೋಲು ಗೆಲುವಿನ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು ಎಂದರು.
    ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ಇದಕ್ಕೆ ಮಕ್ಕಳಿಗೆ ಓದಿನ ಜತೆಗೆ ಆಟಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದರು.
    ಸರ್ಕಾರಿ ನೌಕರರು ಸದಾ ಕೆಲಸದ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಇದರಿಂದ ಮುಕ್ತರಾಗಲು ನಿರಂತರವಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಘ ಆಗಾಗ ಕ್ರೀಡಾಕೂಟಗಳನ್ನು ಆಯೋಜಿಸಬೇಕು. ಇದಕ್ಕೆ ಅಗತ್ಯ ಅನುದಾನವನ್ನು ಕೊಡಿಸುವುದಾಗಿ ಭರವಸೆ ನೀಡಿದರು.
    ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ಸರ್ಕಾರಿ ನೌಕರರಲ್ಲೂ ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಗೆಲುವನ್ನು ಸಾಧಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ, ಜಿಲ್ಲಾ ಖಜಾನಾಕಾರಿ ಮುನಿರೆಡ್ಡಿ, ತಾ.ಪಂ.ಅಧ್ಯಕ್ಷ ಬಿ.ಎಂ ರಾಮಸ್ವಾಮಿ, ಇಒ ಹರ್ಷವರ್ಧನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಜಿ.ನಾಗೇಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹರೀಶ್ ಮತ್ತಿತರರು ಇದ್ದರು.
    ಶಾಟ್ ಫುಟ್ ಎಸೆದ ಅಧಿಕಾರಿಗಳು : ಜಿ.ಪಂ.ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಸಿಇಒ ಬಿ.ೌಜಿಯಾ ತರನ್ನುಮ್, ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಶಾಟ್ ಫುಟ್ ಎಸೆದು ಗಮನ ಸೆಳೆದರು. ಶಾಸಕ ಡಾ ಕೆ.ಸುಧಾಕರ್ ಕ್ರೀಡಾಕೂಟದ ಧ್ವಜಾರೋಹಣವನ್ನು ನೆರವೇರಿಸಿದರು. ಕ್ರೀಡಾಪಟುಗಳನ್ನು ಪರಿಚಯಿಸಿಕೊಂಡು ನಿರಂತರವಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಸಲಹೆ ನೀಡಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 150 ಕ್ಕೂ ಹೆಚ್ಚು ಮಂದಿ ಕ್ರೀಡಾಪಟುಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts