More

    ಕ್ರೀಡಾಪಟುಗಳಿಗೆ ಸರಿಯಾದ ಸೌಲಭ್ಯಗಳಿಲ್ಲ: ಕೆ.ಎಸ್.ಲಿಂಗೇಶ್

    ಬೇಲೂರು: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬೇಲೂರು ಕಬಡ್ಡಿ ಸ್ಪೋರ್ಟ್ಸ್ ಕ್ಲಬ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ ಎರಡನೇ ದಿನದ ಕಬಡ್ಡಿ ಪಂದ್ಯಾವಳಿಗೆ ಶಾಸಕ ಕೆ.ಎಸ್.ಲಿಂಗೇಶ್ ಸೇರಿದಂತೆ ಇತರೆ ಗಣ್ಯರು ಕ್ರೀಡಾಪಟುಗಳಿಗೆ ಶುಭ ಕೋರಿದರು.


    ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ಭಾರತ ದೇಶದಲ್ಲಿ 130 ಕೋಟಿ ಜನಸಂಖ್ಯೆ ಇದ್ದರೂ ಒಲಂಪಿಕ್ ಸೇರಿದಂತೆ ಅಂತರಾಷ್ಟ್ರೀಯ ಪಂದ್ಯಾವಳಿಯಲ್ಲಿ ಪದಕ ಪಟ್ಟಿಯಲ್ಲಿ ಹಿಂದೆ ಇದ್ದೇವೆ. ಇದಕ್ಕೆ ಪ್ರಮುಖವಾಗಿ ನಮ್ಮಲ್ಲಿನ ಕ್ರೀಡಾಪಟುಗಳಿಗೆ ಸರಿಯಾದ ಸೌಲಭ್ಯಗಳಿಲ್ಲದಿರುವುದೆ ಕಾರಣವಾಗಿದೆ. ಆದ್ದರಿಂದ ಸರ್ಕಾರಗಳು ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಲು ಸಹಕಾರಿಯಾಗುವಂತೆ ಸೌಲಭ್ಯಗಳನ್ನು ನೀಡಿ ಪ್ರೋತ್ಸಾಹಿಸಬೇಕು. ಅಲ್ಲದೆ ಬೇಲೂರಿನಲ್ಲಿ ಕ್ರೀಡಾಪಟುಗಳ ಅನುಕೂಲಕ್ಕಾಗಿ ಕ್ರೀಡಾಂಗಣದಲ್ಲಿ ಸೌಲಭ್ಯ ಕಲ್ಪಿಸಲು 1 ಕೋಟಿ ರೂ, ನಲ್ಲಿ ಕಾಮಗಾರಿ ಮಾಡಿಸುತಿದ್ದೇವೆ. ಜತೆಗೆ 50 ಲಕ್ಷ ರೂ, ಯೋಜನೆಯಲ್ಲಿ ಬೇಲೂರಿನಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಮುಂದಾಗಲಿದ್ದೇನೆ. ಅಲ್ಲದೆ ಬೇಲೂರು ಕಬಡ್ಡಿ ಸ್ಪೋರ್ಟ್ಸ್ ಕ್ಲಬ್‌ನಿಂದ ರಾಷ್ಟ್ರೀಯ ಮಟ್ಟದ ಪಂದ್ಯಾವಳಿ ಆಯೋಜಿಸುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂದೆಯೂ ಹೀಗೆ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ನಡೆಸಲು ನಮ್ಮ ಸಹಕಾರವಿರುತ್ತದೆ. ಕ್ರೀಡಾಕೂಟದಲ್ಲಿ ಎಲ್ಲ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡುವಂತೆ ತಿಳಿಸಿದರು.


    ಕಾಂಗ್ರೆಸ್ ಮುಖಂಡ ಗ್ರಾನೈಟ್ ರಾಜಶೇಖರ್ ಮಾತನಾಡಿ, ಇಂದು ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸುತಿದ್ದಾರೆ. ಅದರಲ್ಲೂ ಕಬಡ್ಡಿಯಂತಹ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಪುರುಷರಂತೆ ಆಟವಾಡುತ್ತಿರುವುದು ನೋಡಿದರೆ ನಮ್ಮ ಮಹಿಳೆಯರೆಉ ಎಲ್ಲ ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡುತ್ತಿರುವುದು ಕಾಣಬಹುದಾಗಿದೆ. ಪಂದ್ಯಾವಳಿಯಲ್ಲಿ ಪುರುಷರಂತೆ ಮಹಿಳೆಯರಿಗೂ ಸಮಾನ ಬಹುಮಾನ ನೀಡಬೇಕು ಎಂದು ಕರೆ ನೀಡಿದರು.


    ಒಕ್ಕಲಿಗ ಅಭಿವೃದ್ಧಿ ನಿಗಮದ ನಿರ್ದೇಶಕಿ ಡಾ,.ಸುರಭಿ ರಘು, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೆಶ್, ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಕಾಂಗ್ರೆಸ್ ಮುಖಂಡ ತುಳಸಿದಾಸ್, ಪುರಸಭೆ ಸದಸ್ಯ ಜಗಧೀಶ್, ಉದ್ಯಮಿ ಸಂತೋಷ್, ಗುತ್ತಿಗೆದಾರ ನಾಗೇಶ್, ಬೇಲೂರು ಕಬಡ್ಡಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸಿ.ಹೆಚ್.ಮಹೇಶ್, ಕಾರ್ಯದರ್ಶಿ ಖಾದರ್, ಉಪಾಧ್ಯಕ್ಷ ಮಹೇಶ್ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts