More

    ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ

    ಬೆಳಗಾವಿ: ಕ್ರೀಡೆಗಳು ವಿದ್ಯಾರ್ಥಿಗಳ ಸರ್ವತೋಮುಖ ಶಾರೀರಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸಕ್ರಿಯವಾಗಿ ಭಾಗವಹಿಸುವುದು ಮುಖ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿ.ನಾಗರಾಜ ಹೇಳಿದರು.

    ನಗರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪಿಯು ಕಾಲೇಜುಗಳ ವಿದ್ಯಾರ್ಥಿಗಳ ಟೇಬಲ್ ಟೆನ್ನಿಸ್, ಲಾನ್ ಟೆನ್ನಿಸ್ ಹಾಗೂ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಪಟುಗಳು ಸೋಲು-ಗೆಲುವು ಸಮಾನವಾಗಿ ಪರಿಗಣಿಸಿ, ನಿರಂತರವಾಗಿ ಸಾಧನೆ ಮಾಡುತ್ತಿರಬೇಕು ಹಾಗಾದಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದರು.

    ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಎಲ್.ವಿ.ದೇಸಾಯಿ ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಗೈಯುವ ವಿದ್ಯಾರ್ಥಿಗಳಿಗೆ ಮಹಾವಿದ್ಯಾಲಯವು ಪ್ರೋತ್ಸಾಹ ನೀಡುತ್ತದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದು ಉತ್ತಮ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಮಹಾವಿದ್ಯಾಲಯದ ಪ್ರಾಚಾರ್ಯ ವಿ.ಸಿ. ಕಾಮಗೋಳ, ವೇದಾ ಮಾನೆ, ಶ್ರದ್ಧಾ, ಐಶ್ವರ್ಯಾ, ಕೆಎಲ್‌ಇ ಸಂಸ್ಥೆಯ ಆಜೀವ ಸದಸ್ಯ ಎಸ್.ಜಿ.ನಂಜಪ್ಪನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts