More

    ಕ್ರೀಡೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ

    ಬಾಗಲಕೋಟೆ: ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಶಕ್ತಿಯಿಂದ ಸದೃಢಗೊಳ್ಳುವದರಿಂದ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಹೊರತು ಸೋಲು-ಗೆಲುವು ಮುಖ್ಯವಲ್ಲ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.
    ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಸಾಕ್ಷರಥಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಗಲಕೋಟೆ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
    ಭಾರತದ ದೇಶ ಮೊದಲಿಗಿಂತಲೂ ಇಂದು ಮುಂಚೂಣಿಯಲ್ಲಿದ್ದು, ಹೆಚ್ಚಿನ ಪದಕ ಪ್ರಶಸ್ತಿಗಳನ್ನು ಲಭಿಸುತ್ತಿವೆ ಎಂದರು.
    ಮಹಿಳೆಯರು ಕ್ರೀಡೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದು, ಪದಕಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಪದಕ ಬಂದಿಲ್ಲವೆಂದು ಹತಾಶಯರಾಗದೇ ಮುಂದೊಂದು ದಿನ ಗೆಲುವು ನಮ್ಮದೇ ಎಂಬ ಭರವಸೆ ಇಟ್ಟುಕೊಂಡು ಕ್ರೀಡೆಗಳಲ್ಲಿ ಭಾಗವಹಿಸಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಗಳು ಇದ್ದು, ಉತ್ತಮವಾದ ಮೈದಾನ ಕಲ್ಪಿಸಲಾಗಿದೆ. ಕ್ರೀಡಾ ಅಭ್ಯಾಸದಲ್ಲಿ ತೊಡಗಬೇಕು ಎಂದರು.
    ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುನಾಥ ಗೂಡನವರ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ 100, 1500 ಮೀಟರ್ ಓಟದಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts