More

    ಕ್ರೀಡೆಯಲ್ಲಿ ಸ್ಪರ್ಧಾ ಮನೋಭಾವ ಅವಶ್ಯ

    ಅಥಣಿ, ಬೆಳಗಾವಿ: ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಅಭಿಪ್ರಾಯಪಟ್ಟರು.

    ಸ್ಥಳೀಯ ಶ್ರೀ ಶಿವಯೋಗಿ ಮುರುಘೇಂದ್ರ ಸ್ವಾಮೀಜಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಂತರ್-ಕಾಲೇಜು ಮಟ್ಟದ ಏಕವಲಯ ಪುರುಷ ಮತ್ತು ಮಹಿಳಾ ಬಾಸ್ಕೆಟ್‌ಬಾಲ್ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯದ ನಂತರ ಅಂತಾರಾಷ್ಟ್ರೀಯಮಟ್ಟದ ಕ್ರೀಡಾಕೂಟದಲ್ಲಿ ದೇಶದ ಸಾಧನೆ ಅಷ್ಟೊಂದು ತೃಪ್ತಿಕರವಾಗಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ನಂತರ ಖೇಲೋ ಇಂಡಿಯಾ ಯೋಜನೆಯ ಮೂಲಕ ದೇಶದ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಮೂಲಕ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಗೆ ಕಾರಣರಾಗಿದ್ದಾರೆ. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಎಸ್.ಜಿ. ಮಮದಾಪೂರ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿನ ಕ್ರೀಡಾಸಕ್ತಿ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು. ಪ್ರಾಚಾರ್ಯ ಡಾ. ಬಿ.ಎಸ್.ಕಾಂಬಳೆ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ನಿರ್ದೇಶಕ ಡಾ. ಜೆ.ಎಸ್. ಗಸ್ತಿ ಮಾತನಾಡಿದರು.

    ಕೆಎಲ್‌ಇ ಸಂಸ್ಥೆಯ ಮಾಜಿ ನಿರ್ದೇಶಕ ಎಂ.ಸಿ.ಕೊಳ್ಳಿ, ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಅನೀಲ ಮೆಣಸಿ, ವಿಜಯಕುಮಾರ ಬುರ್ಲಿ, ಪ್ರಕಾಶ ಪಾಟೀಲ, ಕ್ರೀಡಾ ನಿರ್ದೇಶಕ ಡಾ. ಎನ್.ವಿ. ಮಂಜುನಾಥ, ಕೀರ್ತಿ ಬಿರಾದಾರ, ಪ್ರೊ. ಬಿ.ಮಾರುತಿ, ಪ್ರೊ. ಶಾರದಾ ಮಠದ, ಉಪಪ್ರಾಚಾರ್ಯ ಡಾ. ಪ್ರಶಾಂತ ಮಗದುಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts