More

    ಕ್ರೀಡೆಯಿಂದ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ

    ಹುಣಸೂರು: ಕ್ರೀಡಾಕೂಟದಲ್ಲಿ ಸಾಧನೆಗೈದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರ ಮೀಸಲಾತಿ ಕಲ್ಪಿಸಿದ್ದು, ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವ ಮನೋಭಾವ ರೂಢಿಸಿಕೊಳ್ಳಬೇಕೆಂದು ನಗರದ ಸರ್ಕಾರಿ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕೆ.ಎಸ್.ಭಾಸ್ಕರ್ ಕಿವಿಮಾತು ಹೇಳಿದರು.


    ಕಾಲೇಜಿನಲ್ಲಿ ಶನಿವಾರ ಮೇಜರ್ ಧ್ಯಾನಚಂದ್ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.


    ಕ್ರೀಡೆಯಿಂದ ಮನುಷ್ಯನಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನವೃದ್ಧಿ, ಕ್ರಿಯಾಶೀಲತೆ ಹಾಗೂ ಪರಿಪೂರ್ಣ ವ್ಯಕ್ತಿತ್ವ ಹೊಂದಲು ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದರು.


    ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ವಿವಿ ವಾಲಿಬಾಲ್ ತಂಡದ ಆಟಗಾರ್ತಿ ಭೂಮಿಕಾ, ದೈಹಿಕ ಶಿಕ್ಷಣ ಶಿಕ್ಷಕಿ ಕಾವ್ಯ ಅವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲ ಜ್ಞಾನಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಸಿಡಿಸಿ ಉಪಾಧ್ಯಕ್ಷ ಹನಗೋಡು ನಟರಾಜ್, ಪ್ರಾಧ್ಯಾಪಕರಾದ ಪುಟ್ಟಶೆಟ್ಟಿ, ಡಾ.ಕರುಣಾಕರ್, ಡಾ.ದೀಪುಕುಮಾರ್, ಡಾ.ಕಲಾಶ್ರೀ, ಡಾ.ನಂಜುಂಡಸ್ವಾಮಿ, ವಿದ್ಯಾರ್ಥಿನಿಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts