More

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ


    ಮಡಿಕೇರಿ : ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ರಾಜ್ಯ ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ಜೆ.ಎಸ್.ವಿರೂಪಾಕ್ಷಯ್ಯ ಅಭಿಪ್ರಾಯಪಟ್ಟರು.


    ಆಲೂರುಸಿದ್ದಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಗ್ರಾಮೀಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಇತ್ತೀಚೆಗೆ ಚಾಲನೆ ನೀಡಿ ಮಾತನಾಡಿದರು.


    ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆ ಹಾಗೂ ಕ್ರೀಡೆಯಲ್ಲೂ ಪಾಲ್ಗೊಳ್ಳಬೇಕು. ಇದರಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ. ಸರ್ಕಾರ ಕ್ರೀಡಾ ಕ್ರೇತ್ರಕ್ಕೆ ಹೆಚ್ಚು ಅನುದಾನ ನೀಡುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.


    ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ ಮಾತನಾಡಿ, ಇಂದಿನ ಜಾಗತಿಕ ಸ್ಪರ್ಧೆಯಲ್ಲಿ ಕ್ರೀಡೆಯೂ ಒಂದಾಗಿದ್ದು, ಸರ್ಕಾರ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಕೊಡಗು ಕ್ರೀಡೆಯ ತವರೂರಾಗಿದೆ. ಆದರೆ ಕೆಲವರ ಇಚ್ಛಾಶಕ್ತಿಯ ಕೊರತೆಯಿಂದ ಕೊಡಿನಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.


    ತಾಲೂಕು ದೈಹಿಕ ಶಿಕ್ಷಣ ಇಲಾಖೆ ಪರಿವೀಕ್ಷಕ ಬಿ.ಎಂ.ವೇತಣ್ಣ ಮಾತನಾಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ದಮಯಂತಿ ಕರುಂಬಯ್ಯ, ಕ್ಷೇತ್ರ ಶಿಕ್ಷಣಣಾಧಿಕಾರಿ ಕೆ.ವಿ.ಸುರೇಶ್, ರಾಜ್ಯ ಪ್ರಾ.ಶಾ.ಶಿ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಡಾ.ಸದಾಶಿವ ಪಲ್ಯಾದ್ ಇತರರು ಇದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts