More

    ಕ್ವಾರಂಟೈನ್​ಗೆ ಕೋವಿಡ್ ಪ್ರಚಾರ ವಾಹನ

    ಕಾರವಾರ: ಕೋವಿಡ್ -19 ಪ್ರಚಾರಕ್ಕೆ ಬಂದಿದ್ದ ಎಲ್​ಇಡಿ ಪರದೆ ಹೊತ್ತ ವಾಹನ ಕಲಾವಿದರ ವಿರೋಧದ ಹಿನ್ನೆಲೆಯಲ್ಲಿ ಕಳೆದ ಐದಾರು ದಿನಗಳಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲೇ ಠಿಕಾಣಿ ಹೂಡಿದೆ.

    ವಾರ್ತಾ ಮತ್ತು ಪ್ರಸಾರ ಇಲಾಖೆಯಿಂದ ಖಾಸಗಿ ಕಂಪನಿಗೆ ಜಾಗೃತಿ ಕಾರ್ಯಕ್ರಮಕ್ಕಾಗಿ ಗುತ್ತಿಗೆ ನೀಡಲಾಗಿತ್ತು. ಜಿಲ್ಲೆಯಲ್ಲಿ ನವೆಂಬರ್ 14 ರಿಂದ ಪ್ರತಿ ದಿನ 15 ಗ್ರಾಮಗಳಂತೆ 180 ಗ್ರಾಮಗಳಲ್ಲಿ ಕೋವಿಡ್ ಜಾಗೃತಿ ಕಾರ್ಯಕ್ರಮ ನಡೆಸಲು ಸೂಚಿಸಲಾಗಿತ್ತು. ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ವಾಹನ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದರು.

    ಆದರೆ, ಈ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿತ್ತು. ಕಳೆದ 40 ವರ್ಷಗಳಿಂದ ರಾಜ್ಯದ ವಿವಿಧ ಇಲಾಖೆಗಳ ಜಾಗೃತಿ ಕಾರ್ಯಕ್ರಮಗಳನ್ನು ಬೀದಿ ನಾಟಕ ಕಲಾವಿದರು ನಡೆಸಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿ 4500 ಕ್ಕೂ ಅಧಿಕ ಬೀದಿ ನಾಟಕ ಕಲಾವಿದರು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ. ವಾರ್ತಾ ಮತ್ತು ಪ್ರಚಾರ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹೀಗೆ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಪ್ರಚಾರ ನಡೆಸಿ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತ ಬರಲಾಗಿದೆ. ಈಗ ಕೋವಿಡ್ ಕಾರಣದಿಂದ ಕಾರ್ಯಕ್ರಮಗಳನ್ನು ನಿಲ್ಲಿಸಲಾಗಿತ್ತು.

    ಈಗ ಸ್ಥಳೀಯ ಕಲಾವಿದರನ್ನು ನಿರ್ಲಕ್ಷಿ್ಯ, ಮಧ್ಯ ಪ್ರದೇಶದ ಕಂಪನಿಗೆ ಗುತ್ತಿಗೆ ನೀಡಿ. ಮಹಾರಾಷ್ಟ್ರ ನೋಂದಣಿ ಸಂಖ್ಯೆಯ ವಾಹನಗಳ ಮೂಲಕ ಜಿಲ್ಲೆಯ ವಿವಿಧೆಡೆ ಎಲ್​ಇಡಿ ಪರದೆಯ ಮೂಲಕ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರತಿ ಕಾರ್ಯಕ್ರಮಕ್ಕೆ ತಲಾ 5 ಸಾವಿರ ರೂ. ದುಬಾರಿ ವೆಚ್ಚವನ್ನು ಸರ್ಕಾರದಿಂದ ಪಾವತಿಸಲಾಗುತ್ತಿದೆ ಎಂದು ಕಲಾವಿದರು ಆಕ್ಷೇಪಿಸಿದರು. ಜಿಲ್ಲಾಧಿಕಾರಿ ಹಾಗೂ ವಾರ್ತಾ ಇಲಾಖೆಗೆ ತಮ್ಮ ಆಕ್ಷೇಪಣಾ ಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್​ಇಡಿ ವಾಹನ ಸಂಚಾರವನ್ನು ತಡೆಯಲಾಗಿದೆ.

    ಬೀದಿ ನಾಟಕ ಕಲಾವಿದರ ಒಕ್ಕೂಟ ನಮ್ಮ ಇಲಾಖೆ ಆಯುಕ್ತರಿಗೆ ನೇರವಾಗಿ ಆಕ್ಷೇಪಣೆ ಸಲ್ಲಿಸಿದೆ. ಇದರಿಂದ ನ.20 ರವರೆಗೆ ಕೋವಿಡ್ 19 ಜಾಗೃತಿಯ ಎಲ್​ಇಡಿ ಪರದೆ ಹೊತ್ತ ವಾಹನ ಸಂಚಾರಕ್ಕೆ ತಡೆ ನೀಡಲಾಗಿದೆ. ಆಯುಕ್ತರಿಂದ ಸೂಚನೆ ಬಂದ ಬಳಿಕ ನಾವು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.

    | ಕಸ್ತೂರಿ ಪಾಟೀಲ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿ

    ಕಳೆದ ಹಲವು ವರ್ಷಗಳಿಂದ ಸರ್ಕಾರದ ಯೋಜನೆಗಳ ಬಗ್ಗೆ ನಾವು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಬೀದಿ ನಾಟಕ ಕಲಾವಿದರು ಮಾಡಿಕೊಂಡು ಬಂದಿದ್ದೇವೆ. ಈಗ ಕೋವಿಡ್ ಕಾರಣದಿಂದ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಸ್ಥಳೀಯ ಕಲಾವಿದರಿಂದ ಇಂಥ ಕಾರ್ಯಕ್ರಮ ನೀಡಿ ನೆರವಾಗುವ ಬದಲು ಇಲಾಖೆ ಬೇರೆ ರಾಜ್ಯದ ಕಂಪನಿಗಳಿಗೆ ಕಾರ್ಯಕ್ರಮ ಗುತ್ತಿಗೆ ನೀಡಿ ಬಡ ಕಲಾವಿದರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.

    | ಪುರುಷೋತ್ತಮ ಗೌಡ ಬೀದಿ ನಾಟಕ ಕಲಾವಿದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts