More

    ಕ್ವಾರಂಟೈನ್​ನಲ್ಲಿದ್ದವರಿಗೆ ಗ್ರಾಮ ಪ್ರವೇಶ ನಿರ್ಬಂಧಿಸಿ

    ಅಕ್ಕಿಆಲೂರ: ವಿಜಯಪುರ ಜಿಲ್ಲೆಯ ಇಬ್ಬರು ವ್ಯಕ್ತಿಗಳಿಗೆ ಕರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದ ಆಡೂರ ಗ್ರಾಮದ 21 ಜನರನ್ನು ಕ್ವಾರಂಟೈನ್ ಮುಗಿಯುವರೆಗೂ ಗ್ರಾಮಕ್ಕೆ ಪ್ರವೇಶ ನಿರ್ಬಂಧಿಸಬೇಕು ಎಂದು ಗ್ರಾಮಸ್ಥರು ಪಿಡಿಒ ಮಂಜುಳಾ ಅವರಿಗೆ ಮನವಿ ಸಲ್ಲಿಸಿದರು.

    ಜನರ ಆರೋಗ್ಯದ ದೃಷ್ಟಿಯಿಂದ ಸಾರ್ವಜನಿಕರು ಮನೆ ಬಿಟ್ಟು ಹೊರಬಾರದೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ. ಆದ್ದರಿಂದ ಆದರೆ, ಕ್ವಾರಂಟೈನ್ ಅವಧಿ ಮುಗಿಯುವರೆಗೂ 21 ಜನರ ಗ್ರಾಮ ಪ್ರವೇಶ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದರು.

    ಪಿಡಿಒ ಮಂಜುಳಾ ಮೂಲಕ ತಹಸೀಲ್ದಾರ್, ಆರೋಗ್ಯ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಮನವಿ ರವಾನಿಸಲಾಯಿತು.

    ಗ್ರಾಪಂ ಸದಸ್ಯ ಶ್ರೀಕಾಂತ ಕುಂಚಿಗೇರಿ ನೇತೃತ್ವದಲ್ಲಿ ಗ್ರಾಮದ ಪ್ರಮುಖರಾದ ಸದಾಶಿವ ಗುಬ್ಬೇರ, ಮಾಲತೇಶ ಜೋಂಡಗೆನವರ, ಚನ್ನಪ್ಪ ಅಂಗಡಿ, ಮುತ್ತಣ್ಣ ಅಂಗಡಿ, ನಾರಾಯಣಪ್ಪ ಹುಲಗೂರ, ಶೇಖಣ್ಣ ಮುದಕಣ್ಣನವರ, ರಮೇಶ ತಹಸೀಲ್ದಾರ್, ಮೈಲಾರಿ ರ್ಬಾ, ಪರಸಪ್ಪ ಪೊಲೀಸಿ, ಪ್ರಶಾಂತ ಕುಮಟಾಕರ, ಕಾರ್ತಿಕ ಮೆಣಸಕ್ಕನವರ, ಫಕೀರಪ್ಪ ಪಂಗನವರ ಇತರರಿದ್ದರು.

    ಆಡೂರಿನ 19 ಜನರ ಪರೀಕ್ಷಾ ವರದಿ ನೆಗೆಟಿವ್: ವಿಜಯಪುರದಲ್ಲಿ ಕರೊನಾ ಸೋಂಕು ದೃಢಪಟ್ಟಿರುವ ವ್ಯಕ್ತಿಗಳು ಜಿಲ್ಲೆಯ ಹಾನಗಲ್ಲ ತಾಲೂಕಿನ ಆಡೂರು ಗ್ರಾಮಕ್ಕೆ ಬಂದು ಹೋಗಿದ್ದ ಹಿನ್ನೆಲೆಯಲ್ಲಿ ಪರೀಕ್ಷೆ ಒಳಪಡಿಸಿದ್ದ 21 ಜನರ ಪೈಕಿ 19 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಇದರಿಂದ ಜಿಲ್ಲೆಯ ಜನತೆ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.

    ತೀವ್ರ ಉಸಿರಾಟದ ತೊಂದರೆ, ನೆಗಡಿ, ಕಫದಿಂದ ಬಳಲುತ್ತಿದ್ದ 108 ಜನರ ಪರೀಕ್ಷಾ ಮಾದರಿಗಳು ನೆಗೆಟಿವ್ ಬಂದಿದ್ದು, ಇದರಲ್ಲಿ ಆಡೂರಿನ 19 ಜನರ ಮಾದರಿಗಳು ಸೇರಿವೆ. ಇನ್ನುಳಿದ ಇಬ್ಬರ ವರದಿ ಬರಬೇಕಿದೆ. ಮಂಗಳವಾರ ಮತ್ತೆ 94 ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಡಿಎಚ್​ಒ ಡಾ. ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ.

    ಒಟ್ಟು 645 ಜನರ ರಕ್ತ, ಗಂಟಲಿನ ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 454 ಮಾದರಿಗಳು ನೆಗೆಟಿವ್ ಬಂದಿದ್ದು, ಉಳಿದ 191 ಜನರ ಮಾದರಿಗಳ ಪರೀಕ್ಷಾ ವರದಿ ಬರಬೇಕಿದೆ. ಕರೊನಾ ಲಕ್ಷಣಗಳ ಆಧಾರದ ಮೇಲೆ ಸರ್ಕಾರಿ ಕ್ವಾರಂಟೈನ್​ನಲ್ಲಿ 27 ಜನರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಶಂಕಿತ ಲಕ್ಷಣಗಳುಳ್ಳ ಒಟ್ಟು 219 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು ಇವರಲ್ಲಿ 209 ಜನರ 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ. ಉಳಿದ 10 ಜನರು ಕ್ವಾರಂಟೈನ್​ನಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೂ ಯಾರಲ್ಲೂ ಕರೊನಾ ಪಾಸಿಟಿವ್ ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts