More

    ಕ್ವಾರಂಟೈನ್​ನಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳಿ

    ಬಸವಕಲ್ಯಾಣ: ಕರೊನಾ ತಡೆಗಟ್ಟಲು ಸರ್ಕಾರ ಮತ್ತು ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಇರುವವರು ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಶಾಸಕ ಬಿ.ನಾರಾಯಣರಾವ ಮನವಿ ಮಾಡಿದರು.
    ಕಲಖೋರಾ ದೇವಿ ನಗರ ತಾಂಡಾ ಬಳಿ ಶಾಲೆಯಲ್ಲಿಯ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದ ಶಾಸಕರು, ಕೇಂದ್ರಗಳಲ್ಲಿ ಆಡಳಿತದಿಂದ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಬೇರೆ ರಾಜ್ಯದಿಂದ ಕಣ್ಣು ತಪ್ಪಿಸಿ ಯಾರಾದರೂ ಬಂದರೂ ಅಂಥವರು ಸಹ ಆಸ್ಪತ್ರೆಗೆ ಭೇಟಿ ನೀಡಿ, ಅರೋಗ್ಯ ತಪಾಸಣೆ ಮಾಡಿಸಿಕೊಂಡು ಕ್ವಾರಂಟೈನ್ಗೆ ಒಳಗಾಗಬೇಕು. ಗ್ರಾಮಗಳಲ್ಲಿ ಯಾರಾದರೂ ಹೊರಗಿನಿಂದ ಬಂದರೆ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
    ಮುಂಬೈ, ಪೂನಾ, ಹೈದರಾಬಾದ್ ಸೇರಿ ವಿವಿಧೆಡೆ ಉದ್ಯೋಗಕ್ಕಾಗಿ ಹೋದವರು ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೇ ಸಾವಿರಾರು ಸಂಖ್ಯೆಯಲ್ಲಿ ಮರಳಿ ತವರಿಗೆ ಬರುತ್ತಿದ್ದು, ಇವರೆಲ್ಲರಿಗೂ ಆರೋಗ್ಯ ತಪಾಸಣೆಗೆ ಒಳಪಡಿಸಿ, ನಗರ ಮತ್ತು ತಾಲೂಕಿನ ವಿವಿಧ ಗ್ರಾಮಗಳಲ್ಲಿಯಲ್ಲಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಕ್ವಾರಂಟೈನ್ ಕೇಂದ್ರಗಳಿಗೆ ಕಳಿಸಲಾಗುತ್ತಿದೆ ಎಂದರು. ತಾಪಂ ಅಧ್ಯಕ್ಷೆ ಯಶೋಧಾ ರಾಠೋಡ್, ಜಿಪಂ ಮಾಜಿ ಅಧ್ಯಕ್ಷ ನೀಲಕಂಠ ರಾಠೋಡ, ಶ್ರೀ ಅನೀಲ ಮಹಾರಾಜ, ಗ್ರಾಪಂ ಅಧ್ಯಕ್ಷ ವಿಜಯಕುಮಾರ ರಾಠೋಡ, ಡಾ.ಮಂಜುನಾಥ, ಪಿಡಿಒ ಮಹಾಂತೇಶ, ವಿಎ ಸಂತೋಷ ಕಟ್ಟಿಮನಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts