More

    ಕ್ವಾರಂಟೈನ್ ವ್ಯವಸ್ಥೆ ಅಚ್ಚುಕಟ್ಟಾಗಿ ನಿಭಾಯಿಸಿ

    ಲಕ್ಷ್ಮೇಶ್ವರ: ಅಂತಾರಾಜ್ಯ, ಬೇರೆ ಜಿಲ್ಲೆಯಿಂದ ಬಂದವರ ಆರೋಗ್ಯ ಪರೀಕ್ಷೆ, ಕ್ವಾರಂಟೈನ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ರಾಮಣ್ಣ ಲಮಾಣಿ ಮನವಿ ಮಾಡಿದರು.

    ಕರೊನಾ ನಿಯಂತ್ರಣಕ್ಕೆ ಕೈಗೊಂಡ ಮುಂಜಾಗ್ರತೆ ಕ್ರಮ ಮತ್ತು ಕಾರ್ಯಯೋಜನೆಗಳ ಕುರಿತು ಪಟ್ಟಣದ ಪುರಸಭೆ ಸಭಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸದ್ಯಕ್ಕೆ ಲಾಕ್​ಡೌನ್​ನಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದೆ. ಆದರೆ, ಜನರು ಕಡ್ಡಾಯವಾಗಿ ಪರಸ್ಪರ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಆರೋಗ್ಯ ಪರೀಕ್ಷೆಗೊಳಪಡುವುದನ್ನು ಮರೆಯಬಾರದು ಎಂದರು.

    ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಗೆ ಉದ್ಯೋಗ ಕಲ್ಪಿಸಬೇಕು. ಬಿತ್ತನೆ ಹಂಗಾಮು ಪ್ರಾರಂಭವಾಗುವ ಮೊದಲೇ ಅವಶ್ಯಕ ಬೀಜ, ಗೊಬ್ಬರ, ಕೃಷಿ ಪರಿಕರಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಪೊಲೀಸ್ ಇಲಾಖೆಯವರು ಲಾಕ್​ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕರೊನಾ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಬೇಕಾದ ಎಲ್ಲ ಸಹಾಯ-ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದರು.

    ತಹಸೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟಿ ಮಾತನಾಡಿ, ಕರೊನಾ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಪ್ರತಿದಿನ ವ್ಯಾಪಾರ ವಹಿವಾಟಿಗೆ ಕೆಲ ಸೂಚನೆ ನೀಡಿ ಅವಕಾಶ ಕಲ್ಪಿಸಲಾಗಿದೆ ಎಂದರು.

    ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಕುಂಬಾರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ನರಸಮ್ಮನವರ ಮತ್ತು ಎಪಿಎಂಸಿ ಕಾರ್ಯದರ್ಶಿ ಎನ್.ಎ. ಲಕ್ಕುಂಡಿ ಅವರು ಕೈಗೊಂಡ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

    ತಾಲೂಕು ವೈದ್ಯಾಧಿಕಾರಿ ಡಾ. ಸುಭಾಸ ದಾಯಗೊಂಡ ಅವರು ಜನರ ಆರೋಗ್ಯ ಪರೀಕ್ಷೆ, ಹೋಂ ಕ್ವಾರಂಟೈನ್ ಬಗ್ಗೆ ಮಾಹಿತಿ ನೀಡಿದರು. ಡಾ. ಗಿರೀಶ ಮರೆಡ್ಡಿ, ಉಪತಹಸೀಲ್ದಾರ್ ಮಂಜುನಾಥ ದಾಸಪ್ಪನವರ, ಪುರಸಭೆ ಮುಖ್ಯಾಧಿಕಾರಿ ಆರ್.ಎಂ. ಪಾಟೀಲ, ಬಿಇಒ ವಿ.ವಿ. ಸಾಲಿಮಠ, ಲೋಕೋಪಯೋಗಿ ಇಲಾಖೆಯ ನಾಗೇಂದ್ರ ಪಟ್ಟಣಶೆಟ್ಟಿ, ಪಿಎಸ್​ಐ ಶಿವಯೋಗಿ ಲೋಹಾರ, ಪಿ.ಎಸ್. ಬರಿಜಣ್ಣವರ, ಎಸ್.ವಿ. ಕಲಮಠ, ವಿರೂಪಾಕ್ಷಪ್ಪ ಬೂದಿಹಾಳ, ಎಸ್.ವೈ. ತಳವಾರ, ಆನಂದ ಬದಿ, ಮೃತ್ಯುಂಜಯ ಗುಡ್ಡಾನವೇರಿ, ಆನಂದ ಬದಿ, ಬಸವರಾಜ ಬಳಗಾನೂರ, ಮಂಜುನಾಥ ಮುದಗಲ್, ಫಕೀರೇಶ ರಟ್ಟಿಹಳ್ಳಿ, ಇತರರಿದ್ದರು.

    ಲಕ್ಷೆ್ಮೕಶ್ವರ ತಾಲೂಕಿನಲ್ಲಿ ಗ್ರಾಪಂ ವತಿಯಿಂದ ಸ್ವಸಹಾಯ ಸಂಘಗಳ ಮೂಲಕ ಪ್ರತಿ ಮಾಸ್ಕ್​ಗೆ 10ರೂ.ನಂತೆ ಖರೀದಿಸಿ 85 ಸಾವಿರ ಮಾಸ್ಕ್ ವಿತರಿಸಲಾಗಿದೆ. ಎಂಎನ್​ಆರ್​ಇಜಿ ಯೋಜನೆಯಡಿ 37 ಸಾವಿರ ಮಾನವ ದಿನಗಳನ್ನು ಸೃಜಿಸಿ ಉದ್ಯೋಗ ಕಲ್ಪಿಸಿ ಅಂದಾಜು 10 ಕೋಟಿ ರೂ.ಗಳಷ್ಟು ಕಾಮಗಾರಿ ಕೈಗೊಳ್ಳಲಾಗಿದೆ.

    | ಡಾ.ಎನ್.ಎಚ್. ಓಲೇಕಾರ, ತಾಪಂ ಇಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts