More

    ಕ್ಷಯ ರೋಗಿಗಳ ಸಂಖ್ಯೆ ಇಳಿಮುಖ

    ಬೆಳಗಾವಿ: ಕೇಂದ್ರ ಸರ್ಕಾರ ಕೈಗೊಂಡ ಸಮೀಕ್ಷೆಯ ವರದಿ ಪ್ರಕಾರ ಜಿಲ್ಲೆಯಲ್ಲಿ ಕ್ಷಯರೋಗಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

    ನಗರದ ಕೆಎಲ್‌ಇ ಸಂಸ್ಥೆಯ ಜೆಎನ್‌ಎಂಸಿಯ ಪ್ರೊ.ಡಾ.ಬಿ.ಎಸ್.ಕೊಡಕಿಣಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ವಿಭಾಗ, ವಾರ್ತಾ ಇಲಾಖೆ ಸಂಯುಕ್ರಾಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿಶ್ವ ಕ್ಷಯರೋಗ ತಡೆ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    ದೇಶಾದ್ಯಂತ ಕೇಂದ್ರ ಸರ್ಕಾರದಿಂದ ಕೈಗೊಂಡ ಸಮೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯು ಕ್ಷಯರೋಗ ನಿಯಂತ್ರಣದಲ್ಲಿ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪ್ರಯುಕ್ತ ಗಣನೀಯ ಪ್ರಮಾಣದಲ್ಲಿ ಕ್ಷಯರೋಗಿಗಳ ಸಂಖ್ಯೆ ಇಳಿಮುಖವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೆಳ್ಳಿ ಪದಕ ನೀಡಿ ಗೌರವಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಮುಂದಿನ ವರ್ಷ ಜಿಲ್ಲೆಯು ಕ್ಷಯರೋಗ ನಿರ್ಮೂಲನೆಯಡಿ ಸ್ವರ್ಣ ಪದಕ ಪಡೆಯಬೇಕು ಎಂದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ವಿ. ಮುನ್ಯಾಳ ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಜಿಲ್ಲೆಯ ಸಂಘ-ಸಂಸ್ಥೆಗಳ ಸೇವೆ ಹಾಗೂ ಜಿಲ್ಲಾ ಆಡಳಿತದ ಮಾರ್ಗದರ್ಶನದಿಂದ ಜಿಲ್ಲೆಯಲ್ಲಿ ಕ್ಷಯರೋಗಿಗಳ ಸಂಖ್ಯೆ ಕಡಿಮೆಯಾಗಿದೆ ಎಂದರು. ಜಿಲ್ಲಾ ಸರ್ವೇಕ್ಷಾಧಿಕಾರಿ ಡಾ.ಬಿ.ಎನ್ ತುಕ್ಕಾರ, ಡಾ.ಸುಧಾಕರ ಆರ್.ಸಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts