More

    ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ

    ಹನೂರು: ಕ್ಷೇತ್ರದಲ್ಲಿ ಅನೇಕ ಶಾಶ್ವತ ಯೋಜನೆಗಳು ಅನುಷ್ಠಾನಗೊಂಡಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆ. ಆದ್ದರಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿಸುವಂತೆ ಶಾಸಕ ಆರ್.ನರೇಂದ್ರ ಮನವಿ ಮಾಡಿದರು.

    ಹನೂರು ಕ್ಷೇತ್ರ ವ್ಯಾಪ್ತಿಯ ಕಣ್ಣೂರು ಹಾಗೂ ಕಾಮಗೆರೆ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಮತಯಾಚನೆ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜನಪರವಾಗಿದ್ದು, ಐತಿಹಾಸಿಕ ಹಿನ್ನೆಲೆ ಹೊಂದಿದೆ. ದೇಶದಲ್ಲಿ ಉತ್ತಮ ಆಡಳಿತ ನೀಡುವುದರ ಜತೆಗೆ ಬಡವರು, ಹಿಂದುಳಿದವರು, ಕೃಷಿಕರು, ಮಹಿಳೆಯರು ಸೇರಿದಂತೆ ಇತರ ವರ್ಗಕ್ಕೆ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಅನುಕೂಲ ಕಲ್ಪಿಸಿದೆ ಎಂದರು.

    ಇಂದಿರಾಗಾಂಧಿ ಅವರ ಕಾಲದಲ್ಲಿ ಜಾರಿಗೊಂಡ ಯೋಜನೆಗಳು ಇಂದಿಗೂ ಜನಮನ ಗೆದ್ದಿವೆ. ಈ ದಿಸೆಯಲ್ಲಿ ಕಾಂಗ್ರೆಸ್ ಸರ್ಕಾರ ಜನರ ಒಳಿತಿಗಾಗಿ ಶ್ರಮಿಸಿದೆ. ಇತ್ತ ರಾಜ್ಯದಲ್ಲೂ ಜಾರಿಗೊಂಡ ಯೋಜನೆಗಳು ಅಭಿವೃದ್ಧಿಗೆ ಪೂರಕವಾಗಿದೆ. ಆದರೆ ಬಿಜೆಪಿ ಸರ್ಕಾರ ಉತ್ತಮ ಆಡಳಿತವನ್ನು ನೀಡಲಿಲ್ಲ, ಜನಪರ ಯೋಜನೆಗಳನ್ನು ರೂಪಿಸಲಿಲ್ಲ. ಎಲ್ಲ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿ ಸಾಮಾನ್ಯ ಜನರನ್ನು ಕಷ್ಟಕ್ಕೆ ಸಿಲುಕಿಸಿದೆ. ಈ ಬಗ್ಗೆ ಜನರು ಬೇಸತ್ತಿದ್ದು, ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ. ಈ ಚುನಾವಣೆಯಲ್ಲಿ ಪಕ್ಷಕ್ಕೆ ಪೂರಕವಾದ ವಾತಾವರಣವಿದೆ. ಈ ದಿಸೆಯಲ್ಲಿ ಈ ಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿಯಲಿದೆ. ಕ್ಷೇತ್ರದ ಮತ್ತಷ್ಟು ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಈ ಬಗ್ಗೆ ಪ್ರತಿಯೊಬ್ಬರು ಮನದಟ್ಟು ಮಾಡಿಕೊಂಡು ನನ್ನನ್ನು ಗೆಲ್ಲಿಸುವುದರ ಮೂಲಕ ಮತ್ತೊಮ್ಮೆ ಸೇವೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.

    ಪಪಂ ಉಪಾಧ್ಯಕ್ಷ ಗಿರೀಶ್, ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೆರಾಜು, ಮುಖಂಡರಾದ ಮಂಗಲ ಪುಟ್ಟರಾಜು, ನಟರಾಜು, ಸಿದ್ದರಾಜು, ಮಾದೇಶ್, ಮಂಜೇಶ್, ಮಹೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts