More

    ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ

    ಗೋಕಾಕ: ಕರೊನಾ ಚಿಕಿತ್ಸೆಗೆ ಸಂಬಂಧಿಸಿದಂತೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಇಲ್ಲಿನ ಜೆಸಿಐ ಸಂಸ್ಥೆ ವತಿಯಿಂದ ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಬುಧವಾರ ಮನವಿ ಅರ್ಪಿಸಿದರು.

    ಗೋಕಾಕ ನಗರದಲ್ಲಿ ಕಳೆದ 15 ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಕರೊನಾ ಪೀಡಿತ ರೋಗಿಗಳಿಗೆ ಆಕ್ಸಿಜನ್ ಬೆಡ್, ವೆಂಟಿಲೇಟರ್ ವ್ಯವಸ್ಥೆ ಇಲ್ಲವೆಂದು ಹೇಳಿ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದಾರೆ. ಇದರಿಂದ ಕರೊನಾ ರೋಗಿಗಳು ಬೇರೆ ಜಿಲ್ಲೆಗಳಿಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಜತೆಗೆ ತಮ್ಮ ಪ್ರಾಣವನ್ನೂ ಕಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

    ಕೆಲವೊಂದು ಆಸ್ಪತ್ರೆಯವರು ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ. ಹೆಚ್ಚಿನ ದರ ನೀಡಿದರೂ ಸಹ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿಯೂ ಸಹ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಈ ಎಲ್ಲ ಅವ್ಯವಹಾರಗಳನ್ನು ಸರಿಪಡಿಸಲು ತಾಲೂಕು ಟಾಸ್ಕ್ ಪೋರ್ಸ್ ಸಮಿತಿ ಮುತುವರ್ಜಿ ವಹಿಸಿ ರೋಗಿಗಳಿಂದ ಸುಲಿಗೆ ಮಾಡುತ್ತಿರುವ ಖಾಸಗಿ ಆಸ್ಪತ್ರೆ ಮತ್ತು ರಕ್ತ ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ. ಜೆಸಿ ವಿಷ್ಣು ಲಾತೂರ, ಜೆ.ಸಿ. ರಜನಿಕಾಂತ್ ಮಾಳೇದೆ, ಆರ್.ಸಿ.ಕೊಸಂದಲ್, ಪ್ರಕಾಶ ವರ್ಜಿ, ಚಂದ್ರು ಹಳ್ಳಿ, ಎಸ್.ಆರ್.ಹವಾಲ್ದಾರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts