More

    ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಿ

    ಭಟ್ಕಳ: ಜಿಲ್ಲಾಡಳಿತದ ಆದೇಶದಂತೆ ತಾಲೂಕಿನ ಎಲ್ಲ ಖಾಸಗಿ ಆಸ್ಪತ್ರೆಯವರು ಕೋವಿಡ್ ಸೋಂಕಿತರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಉಪವಿಭಾಗಾಧಿಕಾರಿ ಭರತ ಎಸ್. ಹೇಳಿದರು.

    ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕಿನ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆ ವೈದ್ಯರ ಸಭೆಯಲ್ಲಿ ಅವರು ಮಾತನಾಡಿದರು.

    ತಾಲೂಕಿನ ಖಾಸಗಿ ಆಸ್ಪತ್ರೆಗಳು ಮೊದಲು ರೋಗಿಯನ್ನು ದಾಖಲಿಸಿಕೊಳ್ಳುತ್ತಾರೆ. ನಂತರ ಕೋವಿಡ್ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿ ಪಾಸಿಟಿವ್ ಬಂದ ಕೂಡಲೆ ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಕಳುಹಿಸುತ್ತಾರೆ. ಹೀಗಾಗಿ ಜಿಲ್ಲಾ ಆರೋಗ್ಯಾಧಿಕಾರಿಗಳು ಕಳುಹಿಸಿದ ಪತ್ರದಂತೆ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲ ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರನ್ನು ಆಸ್ಪತ್ರೆಯಲ್ಲೇ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.

    ತಹಸೀಲ್ದಾರ್ ರವಿಚಂದ್ರ ಎಸ್, ತಾಲೂಕು ಆರೋಗ್ಯಾಧಿಕಾರಿ ಡಾ. ಮೂರ್ತಿರಾಜ ಭಟ್, ತಾಲೂಕಾಸ್ಪತ್ರೆ ಆಡಳಿತಾಧಿಕಾರಿ ಡಾ. ಸವಿತಾ ಕಾಮತ, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆ ವೈದ್ಯರು ಇದ್ದರು.

    ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯ ಮುರ್ಡೆಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ರೋಗಿಯೊಬ್ಬರು ದಾಖಲಾಗಿದ್ದಾರೆ. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ನಂತರ ಅಲ್ಲಿನ ವೈದ್ಯರು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಭಟ್ಕಳ ಆಸ್ಪತ್ರೆ ಪ್ರಯೋಗಾಲಯದ ಸಿಬ್ಬಂದಿ ತೆರಳಿ ಅಲ್ಲಿಯೆ ಕೋವಿಡ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ. ಖಾಸಗಿ ಆಂಬುಲೆನ್ಸ್​ನಲ್ಲಿ ನಸುಕಿನ ಜಾವ 3 ಗಂಟೆಗೆ ಭಟ್ಕಳದ ಶೀತಲೀಕರಣ ಘಟಕಕ್ಕೆ ಕಳುಹಿಸಿದ್ದಾರೆ. ಅಲ್ಲಿಯೂ ಶೀತಲೀಕರಣದ ಫೀ ತುಂಬಲು ಖಾಸಗಿ ಆಸ್ಪತ್ರೆ ತಕರಾರು ತೆಗೆದಿದೆ ಎನ್ನಲಾಗಿದೆ.

    ಮುರ್ಡೆಶ್ವರದಲ್ಲಿ ಗುರುವಾರ ನಡೆದ ಪ್ರಕರಣ ಗಮನಕ್ಕೆ ಬಂದಿದೆ. ಈ ಕುರಿತು ಖಾಸಗಿ ಆಸ್ಪತ್ರೆಯವರೊಂದಿಗೆ ಇನ್ನೊಮ್ಮೆ ರ್ಚಚಿಸಿ ಏನು ಮಾಡಬೇಕು ಎಂದು ಸೂಚಿಸಲಾಗುವುದು.

    | ಭರತ ಎಸ್., ಉಪವಿಭಾಗಾಧಿಕಾರಿ ಭಟ್ಕಳ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts