More

    ಖಾಸಗಿ ವೈದ್ಯರನ್ನು ಬಳಸಿಕೊಳ್ಳಿ

    ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸುತ್ತಿದ್ದು ಜಿಲ್ಲೆಯಲ್ಲಿನ ಕೋವಿಡ್-19 ಮರಣ ಪ್ರಮಾಣ ತಗ್ಗಿಸಲು ಹಾಗೂ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸಲು ಖಾಸಗಿ ವೈದ್ಯರ ಸಹಕಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಸೂಚನೆ ನೀಡಿದರು.

    ಮಂಗಳವಾರ ಜಿಮ್್ಸ ಆಸ್ಪತ್ರೆಗೆ ಭೇಟಿ ನೀಡಿದ ಅವರು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸೋಂಕಿತರ ಚಿಕಿತ್ಸೆಗಾಗಿ ಜಿಮ್್ಸ ವೈದ್ಯರು, ಸಿಬ್ಬಂದಿ ಹಗಲಿರುಳು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ಸೋಂಕಿತರ ಚಿಕಿತ್ಸೆಗೆ ನಿಯೋಜನೆಗೊಂಡ ವೈದ್ಯರು ಹಾಗೂ ಅಧೀನ ಸಿಬ್ಬಂದಿಗೆ ಅಗತ್ಯ ಸುರಕ್ಷಾ ಪರಿಕರ ಕೊರತೆಯಾಗದಂತೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.

    ಸೋಂಕಿನ ಸಾಮಾನ್ಯ ಲಕ್ಷಣಗಳಿದ್ದರೆ ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಒದಗಿಸಬೇಕು. ಗಂಭೀರ ಸ್ವರೂಪದ ಸೋಂಕಿನ ಲಕ್ಷಣಗಳಿದ್ದವರಿಗೆ ತುರ್ತು ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದರು. ಸೋಂಕಿನಿಂದ ಗುಣ ಹೊಂದಿದವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಅಗತ್ಯದ ಕ್ರಮ ಜರುಗಿಸಬೇಕು. ಆಸ್ಪತ್ರೆಯಲ್ಲಿ ರಚಿಸಲಾದ ಸಮಿತಿಯು ರೋಗಿಗಳನ್ನು ಪರೀಕ್ಷಿಸಿ ಗುಣ ಹೊಂದಿದವರಿಗೆ ಅಗತ್ಯ ಮಾರ್ಗದರ್ಶನ ನೀಡಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಬೇಕು ಎಂದು ಸೂಚಿಸಿದರು.

    ಜಿಪಂ ಸಿಇಒ ಡಾ.ಆನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರೀಗಡದ, ಜಿಮ್್ಸ ನಿರ್ದೇಶಕ ಡಾ.ಪಿ.ಎಸ್. ಭೂಸರೆಡ್ಡಿ ಇತರರಿದ್ದರು.

    ಜಿಲ್ಲೆಯಲ್ಲಿ 96 ಕರೊನಾ ಪ್ರಕರಣಗಳು ಪತ್ತೆ: ಗದಗ ಜಿಲ್ಲೆಯಲ್ಲಿ ಸೋಮವಾರ 96 ಕರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 7653 ಕ್ಕೆ ಏರಿದಂತಾಗಿದೆ. ಇದರಲ್ಲಿ 6453 ಜನ ಗುಣವಾಗಿದ್ದರೆ, 1091 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ ಮಹಾಮಾರಿಯಿಂದ 109 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಮಾಹಿತಿ ನೀಡಿದ್ದಾರೆ. ಸೋಮವಾರ ಗದಗದಲ್ಲಿ 35, ಮುಂಡರಗಿಯಲ್ಲಿ 12, ನರಗುಂದದಲ್ಲಿ 13, ರೋಣದಲ್ಲಿ 8 ಹಾಗೂ ಶಿರಹಟ್ಟಿಯಲ್ಲಿ 18 ಪ್ರಕರಣಗಳು ದಾಖಲಾಗಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts