More

    ಗಡಿಭಾಗದಲ್ಲಿ ಶಾಂತಿ ಕದಡಿದರೆ ಹೋರಾಟ

    ಬೆಳಗಾವಿ: ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗಳ ಮೇಲೆ ಕಲ್ಲು ಎಸೆದು, ಕಪ್ಪು ಮಸಿ ಬಳಿದಿರುವುದನ್ನು ಖಂಡಿಸಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿದರು.
    ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಸಂದರ್ಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರು ಗಡಿಭಾಗದಲ್ಲಿ ಶಾಂತಿ ಕದಡಲು ಪ್ರಚೋದನಕಾರಿ ಹೇಳಿಕೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಮಹಾರಾಷ್ಟ್ರ ಸರ್ಕಾರ ಮತ್ತು ಸ್ಥಳೀಯ ಎಂಇಎಸ್ ಮುಖಂಡರು ತಮ್ಮ ರಾಜಕೀಯ ಲಾಭಕ್ಕಾಗಿ ಗಡಿ ಭಾಗದಲ್ಲಿ ಭಾಷೆಯ ಹೆಸರಿನಲ್ಲಿ ಕಿಡಿ ಹೊತ್ತಿಸುವ ಕೆಲಸ ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕರ್ನಾಟಕದ ಸಾರಿಗೆ ಬಸ್‌ಗಳ ಮೇಲೆ ಕಲ್ಲು ಎಸೆದು ಗಲಾಟೆ ಮಾಡಲು ಮುಂದಾಗುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಜತೆಗೆ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಕರವೇ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ, ಅನ್ನಪೂರ್ಣಾ ಅಸೋಗಾರ, ಮಲ್ಲಿಕಾ ವಾಗಿ, ರಘು ಕಾಕತಿಕರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts