More

    ಗಡಿ ಕನ್ನಡಿಗರ ರಕ್ಷಣೆ ಸರ್ಕಾರದ ಕರ್ತವ್ಯ

    ಬೆಳಗಾವಿ: ಸಾಹಿತ್ಯ, ಸಂಸ್ಕೃತಿ ಎನ್ನುವುದೇ ಒಂದು ಧರ್ಮ. ಅದು ಮಾನವೀಯತೆ ಸಾರುವ ಧರ್ಮ. ಹಾಗಾಗಿಯೇ 12ನೇ ಶತಮಾನದ ಬಸವಾದಿ ಶರಣರು ಸೃಷ್ಟಿಸಿದ ಅಚ್ಚ ಕನ್ನಡ ಸಾಹಿತ್ಯದ ಮೂಲಧಾತು ಸಮಾನತ್ವ ಹಾಗೂ ಮನುಷ್ಯತ್ವವಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಅಭಿಪ್ರಾಯಪಟ್ಟರು.

    ಮಹಿಳಾ ಅಭಿವೃದ್ಧಿ ಮತ್ತು ಸೇವಾಸಂಸ್ಥೆ- ಬೆಳಗಾವಿ, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾಸಮಿತಿ ಸಂಯುಕ್ತ ಆಶ್ರಯದಲ್ಲಿ ನಗರದ ಎಸ್.ಜಿ. ಬಾಳೇಕುಂದ್ರಿ ಇಂಜಿನಿಯರಿಂಗ್ ಇನ್‌ಸ್ಟ್ಟಿಟ್ಯೂಟ್‌ನ ಡಾ. ಪುನೀತರಾಜಕುಮಾರ ವೇದಿಕೆಯಲ್ಲಿ ಭಾನುವಾರ ಜರುಗಿದ ‘ಸಾಂಸ್ಕೃತಿಕ ಉತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು. ಭವ್ಯ ಇತಿಹಾಸದ ಬೇರು ಹೊಂದಿರುವ ಕನ್ನಡಿಗರ ರಕ್ಷಣೆ, ಅದರಲ್ಲೂ ಗಡಿಭಾಗದ ಕನ್ನಡಿಗರ ರಕ್ಷಣೆಯು ಪ್ರಾಧಿಕಾರ ಹಾಗೂ ಸರ್ಕಾರದ ಕರ್ತವ್ಯವಾಗಿದೆ ಎಂದರು. ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿಗೆ ಸೀಮಿತವಾಗದೆ ನಾಡಿನಾದ್ಯಂತ ಕನ್ನಡದ ಕಂಪು ಹರಡುವ ಮೂಲಕ ಗಡಿಭಾಗದ ಕನ್ನಡಿಗರಲ್ಲಿ ಆತ್ಮಸ್ಥೈರ್ಯ ತುಂಬುವಲ್ಲಿ ಡಾ. ಸಿ. ಸೋಮಶೇಖರ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಬೆಳಗಾವಿಯ ಅಶೋಕ ಚಂದರಗಿ ಅವರು ಕನ್ನಡದ ಯುವ ಮನಸ್ಸುಗಳನ್ನು ಕಟ್ಟಿಕೊಂಡು ಕನ್ನಡ ಸಾಂಸ್ಕೃತಿಕ ಉತ್ಸವವನ್ನು ಅಭೂತಪೂರ್ವವಾಗಿ ಆಯೋಜಿಸಿದ್ದಾರೆ ಎಂದರು.

    ಧಾರವಾಡದ ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕ ಮಾತನಾಡಿದರು. ಹಿರಿಯ ಕನ್ನಡ ಹೋರಾಟಗಾರ ಬಾಸೂರು ತಿಪ್ಪೇಸ್ವಾಮಿ, ವಿದ್ಯಾವತಿ ಭಜಂತ್ರಿ ಅತಿಥಿಗಳಾಗಿ ಆಗಮಿಸಿದ್ದರು. ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾಸಮಿತಿ ಪ್ರಧಾನ ಕಾರ್ಯದರ್ಶಿ ಶಂಕರ ಬಾಗೇವಾಡಿ ಸ್ವಾಗತಿಸಿದರು. ಅಧ್ಯಕ್ಷ ಅಶೋಕ ಚಂದರಗಿ ಪ್ರಾಸ್ತಾವಿಕ ಮಾತನಾಡಿದರು. ಸುನಿತಾ ದೇಸಾಯಿ ನಿರೂಪಿಸಿದರು. ಶಿವಪ್ಪ ಶಮರಂತ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts