More

    ಗಣಿಗಾರಿಕೆಗೆ ಅನುಮತಿ ನೀಡಿದರೆ ಹೋರಾಟ

    ಗದಗ: ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ ಪಕ್ಷದಿಂದ ಮತ್ತೆ ಹೋರಾಟದ ಹಾದಿ ತುಳಿಯಬೇಕಾಗುತ್ತದೆ ಎಂದು ಕೆಪಿಸಿಸಿ ನಿಯೋಜಿತ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಎಚ್ಚರಿಕೆ ನೀಡಿದರು.

    ನಗರದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪತಗುಡ್ಡ ರಕ್ಷಣೆಗಾಗಿ ಮಠಾಧೀಶರ ನೇತೃತ್ವದಲ್ಲಿ ಜನಾಂದೋಲನ ರೂಪಿಸಬೇಕಾಗಿದೆ ಎಂದರು.

    ಜೂ. 7ರಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮೂವರು ಕಾರ್ಯಾಧ್ಯಕ್ಷರ ಪದಗ್ರಹಣ ನಡೆಯಲಿದೆ. ಕರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಅಂದು ಬೆಂಗಳೂರಿನಲ್ಲಿ ಸರಳ ಸಮಾರಂಭ ನಡೆಯಲಿದೆ ಎಂದರು.

    ಕರೊನಾ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೆಲಸ ಕೊಂಚ ಸಮಾಧಾನ ತಂದಿದೆ. ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷವಾದ ಕಾಂಗ್ರೆಸ್ ತನ್ನ ಸಂಪೂರ್ಣ ಸಹಕಾರ ನೀಡಿದೆ. ಆದರೆ, ರಾಜ್ಯ ಸರ್ಕಾರ ಘೊಷಿಸಿದ ವಿಶೇಷ ಪ್ಯಾಕೇಜ್ ಅರ್ಹ ಪ್ರತಿಯೊಬ್ಬರಿಗೂ ತಲುಪಿದಾಗಲೇ ಅದರ ಬಗ್ಗೆ ನಂಬಿಕೆ ಬರಲಿದೆ ಎಂದರು.

    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿದರು. ಮಾಜಿ ಸಚಿವ ಬಿ.ಆರ್. ಯಾವಗಲ್, ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ, ಶ್ರೀಶೈಲಪ್ಪ ಬಿದರೂರ, ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ, ಮುಖಂಡರಾದ ಟಿ. ಈಶ್ವರ, ವಿ.ಬಿ. ಸೋಮನಕಟ್ಟಿಮಠ, ಅಶೋಕ ಮಂದಾಲಿ, ಬಸವರಾಜ ಕಡೇಮನಿ, ಎಸ್.ಎನ್. ಸೊರಟೂರ, ಮಿಲಿಂದ ಕಾಳೆ ಮತ್ತಿತರರು ಇದ್ದರು.

    ಕಪ್ಪತಗುಡ್ಡದ ರಕ್ಷಣೆ ಎಲ್ಲರ ಹೊಣೆ

    ಲಕ್ಷ್ಮೇಶ್ವರ: ಅಪರೂಪದ ಔಷಧ ಸಸ್ಯಗಳು ಹಾಗೂ ಚಿರತೆ, ಕತ್ತೆಕಿರುಬ, ಜಿಂಕೆ, ನವಿಲು, ಕಾಡುಹಂದಿಗಳನ್ನು ಹೊಂದಿರುವ ಕಪ್ಪತಗುಡ್ಡದ ರಕ್ಷಣೆ ಎಲ್ಲರ ಹೊಣೆಯಾಗಿದೆ. ಗುಡ್ಡದ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷ ಯಾವುದೇ ಹೋರಾಟಕ್ಕೂ ಸಿದ್ಧವಿದೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

    ಗುರುವಾರ ಪಟ್ಟಣದ ಚಂದನ ಸ್ಕೂಲ್​ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪತಗುಡ್ಡದಲ್ಲಿ ಗಣಿಗಾರಿಕೆ ಚಟುವಟಿಕೆ ಆರಂಭಿಸಲು ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

    ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಕಪ್ಪತಗುಡ್ಡ ಗದಗ ಜಿಲ್ಲೆಯ ಸಂಪತ್ತು. ಅದು ಉಳಿದರೆ ಮಾತ್ರ ನಮ್ಮ ಜಿಲ್ಲೆ ಉಳಿಯುತ್ತದೆ ಎಂಬುದನ್ನು ಯಾರೂ ಮರೆಯಬಾರದು. ಅದನ್ನು ಉಳಿಸಿಕೊಳ್ಳಲು ಹೋರಾಟ ನಿರಂತರವಾಗಿರುತ್ತದೆ ಎಂದರು.

    ಕರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ಹೇರಲಾಗಿದ್ದ ಲಾಕ್​ಡೌನ್ ವೇಳೆ ಆರ್ಥಿಕ ಸಂಕಷ್ಟ ಸರಿದೂಗಿಸಲು ಕೇಂದ್ರ ಸರ್ಕಾರ ಘೊಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಹೇಳಿಕೆಗಷ್ಟೇ ಸೀಮಿತವಾಗಿದೆ. ಕೇಂದ್ರ ಸರ್ಕಾರ ಈ ಹಿಂದೆ ಹಲವು ಬೋಗಸ್ ಪ್ಯಾಕೇಜ್ ಘೊಷಿಸಿದ್ದು, ಆ ಪಟ್ಟಿಗೆ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಕೂಡ ಸೇರಿದಂತಾಗಿದೆ.

    | ಸತೀಶ ಜಾರಕಿಹೊಳಿ, ಕೆಪಿಸಿಸಿ ನಿಯೋಜಿತ ಕಾರ್ಯಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts