More

    ಗಣಿಬಾಧಿತ ಪ್ರದೇಶಗಳತ್ತ ನಿರ್ಲಕ್ಷ್ಯ

    ಚಿತ್ರದುರ್ಗ: ತಾಲೂಕಿನ ಗಣಿಬಾಧಿತ ಪ್ರದೇಶಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಮತ್ತು ಚುನಾಯಿತ ಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಆರೋಪಿಸಿದರು.
    ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿಎಂಎಫ್ ಹಣವನ್ನು ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಬಳಸ ಬೇಕೆಂಬ ನಿಯಮವನ್ನು ಸರಿಯಾಗಿ ಪಾಲಿಸುತ್ತಿಲ್ಲ. ಚಿತ್ರದುರ್ಗ ತಾಲೂಕು ಭೀಮಸಮುದ್ರ, ಹಿರೇಗುಂಟನೂರು, ಬೊಮ್ಮೇನಹಳ್ಳಿ, ವಿ.ಪಾಳ್ಯ, ಮೇಗಳಹಳ್ಳಿ, ಕಡ್ಲೆಗುದ್ದು ಗ್ರಾಮಗಳು ಗಣಿಬಾಧಿತ ಪ್ರದೇಶಗಳಾಗಿವೆ. ಕೂಲಿ ಕಾರ್ಮಿಕರು, ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಈ ಗ್ರಾಮಗಳು ಹಲವು ಮೂಲ ಸೌಲಭ್ಯಗಳಿಂದ ವಂಚಿತವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕುಡಿಯುವ ನೀರು, ಚರಂಡಿ, ರಸ್ತೆ, ಹೈಟೆಕ್ ಆಸ್ಪತ್ರೆ, ಶಾಲಾ ಕಟ್ಟಡ, ಉನ್ನತ ವಿದ್ಯಾಭ್ಯಾಸಕ್ಕಾಗಿ ಡಿಎಂಎಫ್ ಅನುದಾನವನ್ನು ಈ ಗ್ರಾಮಗಳಿಗೆ ಉಪಯೋಗಿಸದೆ, ತಮಗೆ ಬೇಕಾದ ರೀತಿ ಖರ್ಚು ಮಾಡಲು ಮುಂದಾಗಿರುವ ಜನಪ್ರತಿನಿಧಿಗಳ ನಿರ್ಲಕ್ಷೃ ಧೋರಣೆ ವಿರುದ್ಧ ಪಕ್ಷ ಹೋರಾಟ ನಡೆಸಲಿದೆ ಎಂದರು.
    ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸೈಯದ್ ಷಾ ತನ್ವೀರ್, ಉಪಾಧ್ಯಕ್ಷ ನಿಸಾರ್ ಅಹ್ಮದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts