More

    ಗಣೇಶೋತ್ಸವದಲ್ಲಿ ಡಿಜೆ ಸೌಂಡ್ ಬಳಸುವಂತಿಲ್ಲ: ಪೊಲೀಸ್ ಇಲಾಖೆ ಎಚ್ಚರಿಕೆ

    ತ್ಯಾಗರ್ತಿ: ಸಾರ್ವಜನಿಕ ಗಣೇಶೋತ್ಸವದಲ್ಲಿ ಡಿಜೆ ಸೌಂಡ್ ಬಳಸಲು ಅವಕಾಶ ಇಲ್ಲ. ಗಣೇಶೋತ್ಸವ ಸಂಘಟಕರು ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಸಾಗರ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಪ್ರವೀಣ್ ಕುಮಾರ್ ಹೇಳಿದರು.
    ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರ ಶಾಂತಿಸಭೆಯಲ್ಲಿ ಮಾತನಾಡಿ, ಹಿಂದೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಾರ್ವಜನಿಕರನ್ನು ಸಂಘಟನೆ ಮಾಡುವ ಉದ್ದೇಶದಿಂದ ಸಾರ್ವಜನಿಕ ಗಣೇಶೋತ್ಸವ ಆಚರಣೆ ಪದ್ಧತಿ ಪ್ರಾರಂಭಿಸಲಾಯಿತು. ಇಲ್ಲಿಯವರೆಗೂ ಈ ಪದ್ಧತಿ ನಡೆದು ಬಂದಿದೆ. ಈಗಲೂ ಹಿಂದಿನಿಂದ ನಡೆದುಕೊಂಡು ಬಂದ ಆಚರಣೆಗಳಿಗೆ ಯಾವುದೇ ಅಭ್ಯಂತರವಿಲ್ಲ. ಆದರೆ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸಕ್ಕೆ, ಗೊಂದಲಗಳಿಗೆ ಅವಕಾಶ ಇಲ್ಲದಂತೆ ಸರ್ಕಾರದ ನಿಯಮಾನುಸಾರ ಅನುಮತಿ ಪಡೆದು ಹಬ್ಬ ಆಚರಣೆ ಮಾಡಬೇಕು ಎಂದು ಸೂಚಿಸಿದರು.
    ಗಣೇಶೋತ್ಸವ ಸಮಿತಿ ಸದಸ್ಯರು ಉತ್ಸವ ಮುಗಿಯುವವರೆಗೂ ಹೆಚ್ಚು ಜವಾಬ್ದಾರಿ ವಹಿಸಿಕೊಂಡು ಒಗ್ಗಟ್ಟಿನಿಂದ ಇರಬೇಕು. ರಾತ್ರಿ ಹತ್ತು ಗಂಟೆಗೆಯ ಒಳಗೆ ಗಣಪತಿ ಮೆರವಣಿಗೆ, ವಿಸರ್ಜನೆ ಮಾಡಬೇಕು. ವಿದ್ಯುತ್ ಅವಘಡಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಬೇರೆಯವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಮೆರವಣಿಗೆ ಸಮಯದಲ್ಲಿ ಮಹಿಳೆಯರು, ಹೆಣ್ಣು ಮಕ್ಕಳಿಗೆ ಯಾವುದೇ ಮುಜುಗರ ಉಂಟಾಗದ ರೀತಿಯಲ್ಲಿ ವರ್ತಿಸಬೇಕು. ಅವಶ್ಯಕತೆ ಇದ್ದರೆ ಯಾವುದೇ ಸಮಯದಲ್ಲಿ ಪೊಲೀಸ್ ಸಹಕಾರ ನೀಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts