More

    ಗದಗ: ಕೇಂದ್ರದ ಯೋಜನೆಗಳನ್ನುಪ್ರಚಾರ ಮಾಡಬೇಕು -ಪ್ರದೀಪ ಶೆಟ್ಟರ

    ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವಾರು ಜನಪರ ಯೋಜನೆಗಳನ್ನು ಬಿಜೆಪಿ ಕಾರ್ಯಕರ್ತರು ವ್ಯಾಪಕವಾಗಿ ಪ್ರಚಾರ ಮಾಡಬೇಕು. ಸಂಘಟಿತರಾಗಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ತರುವಲ್ಲಿ ಶ್ರಮಿಸಬೇಕು. ಆ ಮೂಲಕ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಪುನಃ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವಂತಾಗಬೇಕು ಎಂದು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಚುನಾವಣೆ ಉಸ್ತುವಾರಿ ಪ್ರದೀಪ ಶೆಟ್ಟರ ಹೇಳಿದರು.
    ಮುಂಡರಗಿ ಪಟ್ಟಣದ ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಮುಂಡರಗಿ ಮಂಡಲ ಸಭೆಯಲ್ಲಿ ಅವರು ಮಾತನಾಡಿದರು.
    ಮಾ.2ರಿಂದ ಬಿಜೆಪಿ ವಿಜಯ ರಥಯಾತ್ರೆ ಆರಂಭವಾಗಲಿದ್ದು, ಗದಗ ಜಿಲ್ಲೆಯಲ್ಲಿಯೂ ಸಂಚರಿಸಲಿದೆ. ರಾಷ್ಟ್ರೀಯ ನಾಯಕರೊಬ್ಬರು ವಿಜಯರಥ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಈ ಕುರಿತು ಸಮಗ್ರ ಮಾಹಿತಿ ನೀಡಲಾಗುವುದು. ಚುನಾವಣೆ ಮುಗಿಯುವವರೆಗೂ ನಾನು ಕ್ಷೇತ್ರದ ಸಂಪರ್ಕದಲ್ಲಿರುತ್ತೇನೆ ಎಂದು ತಿಳಿಸಿದರು.
    ಶಾಸಕ ರಾಮಣ್ಣ ಲಮಾಣಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುವ ಮೂಲಕ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಗೆ ಬದ್ಧರಾಗಿ ಕೆಲಸ ಮಾಡಬೇಕು ಎಂದರು.
    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ ಗಣಾಚಾರಿ ಮಾತನಾಡಿದರು. ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಪ್ರಸ್ತಾವಿಕವಾಗಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಬಿಜೆಪಿ ಮುಂಡರಗಿ ಮಂಡಲದ ಮಾಜಿ ಅಧ್ಯಕ್ಷ ದೇವಪ್ಪ ಕಂಬಳಿ, ಬಸವರಾಜ ಬಿಳಿಮಗ್ಗದ ಇತರರು ಇದ್ದರು.
    ಮಂಡಲದ ಪ್ರಧಾನ ಕಾರ್ಯದರ್ಶಿ ದೇವಪ್ಪ ಇಟಗಿ ಕಾರ್ಯಕ್ರಮ ನಿರೂಪಿಸಿದರು. ರಮೇಶ ಹುಳಕಣ್ಣವರ ವಂದಿಸಿದರು.
    25ಎಂಡಿಜಿ2 ಬಿಜೆಪಿ ಸಭೆ ಫೋಟೋ ಶೀರ್ಷಿಕೆ: ಮುಂಡರಗಿ ಪಟ್ಟಣದ ಅಂಬಾಭವಾನಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ಮುಂಡರಗಿ ಮಂಡಲ ಸಭೆಯಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಚುನಾವಣೆ ಉಸ್ತುವಾರಿ ಪ್ರದೀಪ ಶೆಟ್ಟರ ಮಾತನಾಡಿದರು. ಶಾಸಕ ರಾಮಣ್ಣ ಲಮಾಣಿ, ಹೇಮಗಿರೀಶ ಹಾವಿನಾಳ, ಮಾಧವ ಗಣಾಚಾರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts