More

    ಗದಗ: ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸದಾವಕಾಶ:

    ಜಿಲ್ಲೆಯಲ್ಲಿ ಫೆ. 11 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಬಸವರಾಜ ತಿಳಿಸಿದರು.

    ಅವರು ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಪರನ್ಸ ಹಾಲ್‍ನಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

    ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ, ಗದಗದಲ್ಲಿ 6 ಹಾಗೂ ರೋಣದಲ್ಲಿ 3, ಲಕ್ಷ್ಮೇಶ್ವರದಲ್ಲಿ 2, ಮುಂಡರಗಿಯಲ್ಲಿ 2 ಹಾಗೂ ನರಗುಂದದಲ್ಲಿ 1 ಸೇರಿ ಒಟ್ಟು 14 ಬೆಂಚಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 18056 ವಿವಿಧ ಚಾಲ್ತಿಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 4323 ಪ್ರಕರಣಗಳನ್ನು ಗುರುತಿಸಿದೆ. ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‍ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts