More

    ಗದಗ: ಶಿವರಾತ್ರಿಗೆ ಸಿದ್ಧತೆ

    ಜಿಲ್ಲೆಯಲ್ಲಿ ಶಿವರಾತ್ರಿ ಹಬ್ಬದ ಖರೀದಿ ಜೋರಾಗಿದೆ. ಶಿವರಾತ್ರಿ ಮುನ್ನಾ ದಿನ ಶುಕ್ರವಾರ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಗತ್ಯ ವಸ್ತುಗಳ ಖರೀದಿ ಜತೆಗೆ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಆಚರಣೆ ಅಂಗವಾಗಿ ಶನಿವಾರ ಶಿವರಾತ್ರಿ ಉಪವಾಸ, ಜಾಗರಣೆ ಮಾಡಿ ಶಿವ ಸ್ಮರಣೆ ಮಾಡಲು ಭಕ್ತರು ಸಹ ಸಜ್ಜಾಗಿದ್ದಾರೆ.
    ನಗರದ ತೋಂಟದಾರ್ಯ ಮಠದ ರಸ್ತೆ, ಕೆ.ಸಿ.ರಾಣಿ ರಸ್ತೆ, ಮುಳಗುಂದ ನಾಕಾ, ಗ್ರೇನ್​ ಮಾರುಕಟ್ಟೆ, ಬೆಟಗೇರಿಯ ಬಸ್​ ನಿಲ್ದಾಣ ಹತ್ತಿರ ಸೇರಿದಂತೆ ವಿವಿಧೆಡೆ ಕಲ್ಲಂಗಡಿ ಹಣ್ಣಿನ ಮಾರಾಟ ಜತೆಗೆ ವಿವಿಧ ಹಣ್ಣಿನ ಮಾರಾಟ ಜೋರಾಗಿ ನಡೆಯಿತು.

    • ಹಣ್ಣುಗಳ ಖರೀದಿ ಜೋರು:
      ಶಿವರಾತ್ರಿ ಅಂದರೆ ಸಾಕು ಶಿವನ ಆರಾಧಕರು ಶಿವರಾತ್ರಿ ದಿನದಂದು ಇಡೀ ದಿನ ಉಪವಾಸ ಮಾಡುತ್ತಾರೆ. ಸಂಜೆ ಶಿವನ ದರ್ಶನ ಪಡೆದ ನಂತರವೇ ಹಣ್ಣುಗಳನ್ನು ಸ್ವೀಕರಿಸುತ್ತಾರೆ. ಹೀಗಾಗಿ ಶಿವರಾತ್ರಿ ಹಬ್ಬ ಬಂದರೆ ಸಾಕು ನಗರದ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ಹಣ್ಣುಗಳು ಗ್ರಾಹಕರನ್ನು ಕೈಬೀಸಿ ಕರೆಯುತ್ತಿವೆ. ಅದರಲ್ಲಿ ಪ್ರಮುಖವಾಗಿ ದ್ರಾಕ್ಷಿ, ಕರಜೂರ, ಬಾಳೆಹಣ್ಣು, ಕಲ್ಲಂಗಡಿ, ಚಿಕ್ಕು ಭರ್ಜರಿಯಾಗಿ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿವೆ.
    • ಶಿವನಿಗೆ ವಿಶೇಷ ಪೂಜೆ:
      ಜಿಲ್ಲೆಯ ಎಲ್ಲ ಶಿವ ದೇವಾಲಯಗಳಲ್ಲಿ ಶಿವಲಿಂಗ ಮೂತಿರ್ಗೆ ವಿವಿಧ ಪೂಜೆ, ಅಭಿಷೇಕ, ರುದ್ರಾಭಿಷೇಕ, ಶಿವನಿಗೆ ಬಿಲ್ವಪತ್ರೆ ಅಪಿರ್ಸುವ ಪೂಜೆ, ಮಂಗಳಾರತಿ, ಶಿವ ಸಹಸ್ರನಾಮ ಪಠಣ, ಸಂಕೀರ್ತನೆ, ಪುರಾಣ ಪಠಣ, ಸಂಗೀತೋತ್ಸವ ಮತ್ತು ಅಹೋರಾತ್ರಿ ಶಿವನಾಮ ಜಪ ನಡೆಯಲಿದೆ. ಶಿವನ ಆರಾಧಕರು ಜಾಗರಣೆ ನಡೆಸಲು ವಿವಿಧ ದೇವಸ್ಥಾನಗಳಲ್ಲಿ ಪತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ.
    • ಟ್ರಾಫಿಕ್​ ಜಾಮ್​: ಶಿವರಾತ್ರಿ ಹಬ್ಬದ ಅಂಗವಾಗಿ ನಗರದ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೈಕ್​ ಹಾಗೂ ಕಾರುಗಳು ಮಾರುಕಟ್ಟೆಗೆ ಬಂದ ಹಿನ್ನಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಟ್ರಾಫಿಕ್​ ಜಾಮ್​ ಆಗಿತ್ತು. ಬೈಕ್​ ಸವಾರರು ಹಾಗೂ ಸಾರ್ವಜನಿಕರು ರಸ್ತೆ ದಾಟಲು ಹರಸಾಹಸ ಪಡಬೇಕಾಗಿತ್ತು. ರಸ್ತೆ ಮಧ್ಯೆ ಭಾಗದಲ್ಲಿ ವಾಹನಗಳನ್ನು ಪಾಕಿರ್ಂಗ್​ ಮಾಡಿದ್ದರಿಂದ ಸಾಮಾನ್ಯವಾಗಿ ಟ್ರಾಫಿಕ್​ ಅಧಿಕವಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts