More

    ಗರ್ಭಿಣಿಯರ ಆರೋಗ್ಯ ತುಂಬಾ ಮುಖ್ಯ

    ಬೇಲೂರು: ಗರ್ಭಿಣಿಯರು ಕಾಲ ಕಾಲಕ್ಕೆ ಸರಿಯಾಗಿ ಚಿಕಿತ್ಸೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಹೇಳಿದರು.


    ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದ ಅಂಗವಾಗಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿಯಿಂದ ಪಟ್ಟಣದ ಬಸ್ ನಿಲ್ದಾಣ ಮುಂಭಾಗ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಿಂದ ಉತ್ತಮ ಕಾರ್ಯಕ್ರಮ ಆಯೋಜಿಸಿದ್ದಾರೆ. ಇಂತಹ ಕಾರ್ಯಕ್ರಮಗಳಲ್ಲಿ ಗರ್ಭಿಣಿಯರು ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು.


    ವೈದ್ಯಾಧಿಕಾರಿ ಡಾ.ಚೈತ್ರಾ ಮಾತನಾಡಿ, ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವುದಕ್ಕಾಗಿ ಸರ್ಕಾರ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ ರೂಪಿಸಿದೆ. ಈ ಮೂಲಕ ತಾಯಿ ಮತ್ತು ಮಗುವಿನ ಮರಣ ಪ್ರಮಾಣವನ್ನು ಇಳಿಸುವ ಗುರಿಯನ್ನು ಹೊಂದಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಜತೆಗೆ ಶಿಶು, ತಾಯಿ ಮರಣ ತಪ್ಪಿಸುವ ನಿಟ್ಟಿನಲ್ಲಿ ತಾಯಿ, ಮಕ್ಕಳಿಗೆ ಸಂಬಂಧಿಸಿದಂತೆ ಹಲವಾರು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.


    ಲಯನ್ಸ್ ಸಂಸ್ಥೆ ಅಧ್ಯಕ್ಷ ಸುರೇಶ್, ಪುರಸಭೆ ಸದಸ್ಯೆ ಮಣಿಶೇಖರ್, ಸರ್ಕಾರಿ ಆಸ್ಪತ್ರೆ ಐಸಿಟಿಸಿ ಆಪ್ತ ಸಮಾಲೋಚಕ ಧರಣೇಶ್, ಆರೋಗ್ಯ ಶಿಕ್ಷಣಾಧಿಕಾರಿ ಉಷಾ, ಹಿರಿಯ ಆರೋಗ್ಯಾಧಿಕಾರಿ ಮಂಗಳಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿ ದಯಾನಂದ್, ಐಸಿಟಿಸಿ ಸ್ವಯಂ ಸೇವಕ ರೇಣುಕಾ ಪ್ರಸಾದ್ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts