More

    ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯ ನಿರ್ವಹಿಸಿದ ಜಿಲ್ಲಾಧಿಕಾರಿ

    ಗದಗ: ರೋಣ ತಾಲೂಕಿನ ಕಳಕಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಶನಿವಾರ ಚಾಲನೆ ನೀಡಿದರು.

    ನಂತರ ಮಾತನಾಡಿದ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಕಂದಾಯ ವಿಷಯಗಳ ಪರಿಹಾರಕ್ಕೆ ಉತ್ತಮ ವೇದಿಕೆಯಾಗಿದೆ ಈ ವೇದಿಕೆಯನ್ನು ಸಾರ್ವಜನಿಕರು ಸದ್ಬಳಕ್ಕೆ ಮಾಡಿಕೊಳ್ಳಬೇಕು ಸಾಧ್ಯವಾದಷ್ಟು ಸಾರ್ವಜನಿಕರ ಬೇಡಿಕೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದರು.

    ಕಳಕಾಪುರ ಗ್ರಾಮದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾದ ನ್ಯಾಯಬೆಲೆ ಅಂಗಡಿಯನ್ನು ಈ ತಿಂಗಳ ಅಂತ್ಯದೊಳಗಾಗಿ ನೀಡುವ ಭರವಸೆ ನೀಡಿದರು. ಆರೋಗ್ಯ ಇಲಾಖೆ ಕೊಡ ಮಾಡುವ ಆಭಾ ಕಾರ್ಡ್ ಅನ್ನು ಎಲ್ಲರೂ ಪಡೆದುಕೊಂಡು ಅದರ ಪ್ರಯೋಜನ ಪಡೆದುಕೊಳ್ಳಬೇಕು. ಇದರಿಂದ ಪ್ರತಿ ವ್ಯಕ್ತಿಯ ಆರೋಗ್ಯ ಚಿಕಿತ್ಸೆಯ ವಿವರವನ್ನು ತಕ್ಷಣ ಪಡೆಯುವ ಮೂಲಕ ಉತ್ತಮ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ ಎಂದರು.

    ಗ್ರಾಮಗಳ ಅಭಿವೃದ್ಧಿಯಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಈ ಪರಿಕಲ್ಪನೆ ಅಡಿ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ವಿವಿಧ ಯೋಜನೆಗಳು ಜಾರಿಯಲ್ಲಿದ್ದು ಅವುಗಳನ್ನು ಸಾರ್ವಜನಿಕರು ಸಮರ್ಪಕವಾಗಿ ಉಪಯೋಗಿಸಿಕೊಂಡು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕೆಂದು ತಿಳಿಸಿದ ಅವರು ವಿವಿಧ ಯೋಜನೆಗಳು ಅಡಿಯಲ್ಲಿ ಮಂಜೂರಾದ ಫಲಾನುಭವಿಗಳಿಗೆ ವೇದಿಕೆಯಲ್ಲಿ ಮಂಜೂರಾತಿ ಪತ್ರ ಹಾಗೂ ಸೌಲಭ್ಯಗಳನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ವಿತರಣೆ ಮಾಡಿದರು.

    ರೋಣ ತಹಶೀಲ್ದಾರ್ ಕುಮಾರಿ ವಾಣಿ ಉಂಕಿ ಮಾತನಾಡಿ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಪರಿಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಪಹಣಿ ತಿದ್ದುಪಡಿ, ಪಿಂಚಣಿ ಆದೇಶ ಸೇರಿದಂತೆ ಇತರೆ ಸೌಲಭ್ಯಗಳನ್ನು ಸ್ಥಳದಲ್ಲಿಯೇ ವಿತರಿಸುವದು ಕಾರ್ಯಕ್ರಮದ ಆಶಯವಾಗಿದೆ. ಸದರಿ ಕಾರ್ಯಕ್ರಮದಲ್ಲಿ ವೈಯಕ್ತಿಕ, ಸಮುದಾಯಿಕ ಸೌಲಭ್ಯಗಳ ಕುರಿತು ಅಹವಾಲು ಸಲ್ಲಿಸಿದ್ದಲ್ಲಿ ಆದ್ಯತೇ ಮೇರೆಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುವದು. ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳಿಗೆ ಅಗತ್ಯದ ಪ್ರಸ್ತಾವನೆ ಸಲ್ಲಿಸಲಾಗುವದು ಎಂದರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಗ್ರಾಮಸ್ಥರು ಪಾಲ್ಗೊಳ್ಳುವ ಮೂಲಕ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷ ಕೆ ಎಂ ರಾಜು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ತಾಲೂಕ ಮಟ್ಟದ ಅಧಿಕಾರಿಗಳು ಇದ್ದರು

    ಕಳಕಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮಕ್ಕಳು ಅತಿಥಿಗಳನ್ನು ಸ್ವಾಗತ ಗೀತೆ ಮೂಲಕ ಸ್ವಾಗತಿಸಿ, ಪ್ರಾರ್ಥಿಸಿ, ನಾಡಗೀತೆ ರೈತ ಗೀತೆ ಹಾಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹ ಅಧಿಕಾರಿ ಸಂತೋಷ್ ಪಾಟೀಲ್ ಅತಿಥಿಗಳನ್ನು ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಸಜ್ಜನರ ವಂದಿಸಿದರು.

    ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತೆರೆಯಲಾದ ವಿವಿಧ ಇಲಾಖೆಗಳ ಪ್ರಚಾರದ ಸ್ಟಾಲುಗಳನ್ನು ಉದ್ಘಾಟಿಸಿದರು. ನಂತರ ಜಿಲ್ಲಾಧಿಕಾರಿಗಳು ಗ್ರಾಮ ಪ್ರದಕ್ಷಣೆ ನಡೆಸುತ್ತಾ, ಪಶು ಸಂಗೋಪನ ಇಲಾಖೆಯಿಂದ ತೆರೆಯಲಾದ ಜಾನುವಾರು ತಪಾಸಣಾ ಶಿಬಿರವನ್ನು ಗೋಪುಜೆ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಾತೃ ವಂದನಾ ಯೋಜನೆ ಅಡಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯ ನಿರ್ವಹಿಸಿದರು ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಮಕ್ಕಳ ಹುಟ್ಟು ಹಬ್ಬ ಆಚರಿಸಿದರು.

    ಕಳಕಾಪುರ ಗ್ರಾಮದ ವಿವಿಧ ಬೀದಿಗಳಲ್ಲಿ ಪ್ರದಕ್ಷಣೆ ಮಾಡಿ ಪರಿಶಿಷ್ಟ ಜಾತಿ ಪಂಗಡದ ಕಾಲೋನಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರದಗಳನ್ನು ಸಹಾನುಭೂತಿಯಿಂದ ಆಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ವಾಣಿ ಉಂಕಿ ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಜೊತೆಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts