More

    ಗಾಂಜಾ ದಂಧೆ ಗಂಭೀರವಾಗಿ ಪರಿಗಣಿಸಿ

    ಸಾಗರ: ತಾಲೂಕು ವ್ಯಾಪ್ತಿಯಲ್ಲಿ ಗಾಂಜಾ ಸೇರಿ ಮಾದಕ ವಸ್ತುಗಳ ಸೇವನೆ ಪ್ರಕರಣ ಜಾಸ್ತಿಯಾಗುತ್ತಿದೆ. ಇದರಿಂದ ಅಪಘಾತ, ಕೊಲೆ ಮುಂತಾದವು ನಡೆಯುತ್ತಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹರತಾಳು ಹಾಲಪ್ಪ ಸೂಚಿಸಿದರು.

    ನಗರದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿ, ಗಾಂಜಾ ಎಲ್ಲಿಂದ ಬರುತ್ತಿದೆ, ಯಾರು ಖರೀದಿಸುತ್ತಿದ್ದಾರೆ, ಯಾರು ಮಾರಾಟ ಮಾಡುತ್ತಿದ್ದಾರೆ ಎನ್ನುವ ಕುರಿತು ಸೂಕ್ತ ತನಿಖೆ ನಡೆಸಬೇಕು. ಪೊಲೀಸ್, ಅರಣ್ಯ, ಅಬಕಾರಿ ಇಲಾಖೆಗಳು ಜಂಟಿಯಾಗಿ ಇದರ ಬಗ್ಗೆ ಕಾರ್ಯಾಚರಣೆಗೆ ಇಳಿಯಬೇಕು. ಇದರ ಜತೆಗೆ ಕೆಮ್ಮಿನ ಔಷಧ ಸೇವಿಸಿ ಮತ್ತು ಬರಿಸಿಕೊಳ್ಳುವ ಯುವಕರ ಜಾಲವೂ ಇದೆ. ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ತಿಳಿಸಿದರು.

    ಭಾನುವಾರ ಬಳಸಗೋಡು ಸಮೀಪ ನಗರಸಭೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು 6 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ. ಇದು ಮುಂದುವರಿಯಬೇಕು. ನಗರ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಸರ್ಕಾರಿ ಜಮೀನು ಒತ್ತುವರಿಯಾಗಿದೆ ಅದನ್ನು ತಕ್ಷಣ ತೆರವು ಮಾಡಿ ಬೇಲಿ ಹಾಕಿ ಸಂರಕ್ಷಣೆ ಮಾಡಬೇಕು

    ಉಪವಿಭಾಗಾಧಿಕಾರಿ ಡಾ. ಎಲ್.ನಾಗರಾಜ್, ತಹಸೀಲ್ದಾರ್ ಚಂದ್ರಶೇಖರ ನಾಯ್ಕ, ಪೌರಾಯುಕ್ತ ಎಚ್.ಕೆ.ನಾಗಪ್ಪ, ತಾಪಂ ಇಒ ಪುಷ್ಪಾ ಎಂ.ಕಮ್ಮಾರ್, ಮೆಸ್ಕಾಂ ಇಂಜಿನಿಯರ್​ಗಳಾದ ಚಂದ್ರಶೇಖರ್, ಹಾಲೇಶಪ್ಪ, ಕೆ.ದಿನೇಶ್, ಸರ್ಕಲ್ ಇನ್ಸ್​ಪೆಕ್ಟರ್ ಮಹಾಬಲೇಶ್ವರ ನಾಯ್ಕ, ಸುನೀಲ್ ಕುಮಾರ್, ನಗರಸಭೆ ಅಧಿಕಾರಿಗಳಾದ ರಾಮಚಂದ್ರ, ಸಂತೋಷ್ ಕುಮಾರ್ ಇತರರಿದ್ದರು.

    ಆಸ್ಪತ್ರೆಗೆ ದಿಢೀರ್ ಭೇಟಿ: ನಂತರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕರು ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದ ದೃಶ್ಯವನ್ನು ಕಂಡು ತಕ್ಷಣ ಡಿಎಚ್​ಒಗೆ ಫೋನ್​ನಲ್ಲಿ ಮಾತನಾಡಿ, ನಿಗದಿತ ಸಮಯಕ್ಕೆ ಬರದೇ ಇರುವ ವೈದ್ಯರ ಮೇಲೆ ಕಾನೂನುಕ್ರಮ ಕೈಗೊಳ್ಳಿ. ಕೆಲವು ಸಿಬ್ಬಂದಿ ಕೂಡ ಹಾಜರಾತಿ ಹಾಕಿ ಬೇರೆ ಕೆಲಸಕ್ಕೆ ತೆರಳುವವರಿದ್ದಾರೆ. ಈ ಬಗ್ಗೆ ನನಗೆ ದೂರು ಬಂದಿದೆ. ಅಂಥವರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts