More

    ಗಿರಿಜನರಿಗೆ ಮೂಲಸೌಕರ್ಯ ಒದಗಿಸಿ

    ಹನೂರು: ತಾಲೂಕಿನ ಗಿರಿಜನರ ಪೋಡುಗಳಿಗೆ ಸರ್ಕಾರ ಮೂಲಸೌಕರ್ಯವನ್ನು ಒದಗಿಸುವುದರ ಮೂಲಕ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾ ಸೋಲಿಗ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಸಿ.ಮಾದೇಗೌಡ ಒತ್ತಾಯಿಸಿದರು.


    ಪಟ್ಟಣದ ಗಿರಿಜನರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ (ಲ್ಯಾಂಪ್ಸ್) ಆವರಣದಲ್ಲಿ ಬುಧವಾರ ಸಮತಾ ಟ್ರಸ್ಟ್ ಹಾಗೂ ಏಟ್ರಿ ಸಂಸ್ಥೆಯ ವತಿಯಿಂದ ಬುಡಕಟ್ಟು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.


    ಹನೂರು ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬುಡಕಟ್ಟು ಜನರು ವಾಸಿಸುತ್ತಿದ್ದಾರೆ. ಆದರೆ ರಸ್ತೆ, ವಿದ್ಯುತ್ ಸೇರಿದಂತೆ ಇನ್ನಿತರ ಕೆಲ ಮೂಲಸೌಕರ್ಯಗಳು ಮರೀಚಿಕೆಯಾಗಿದೆ. ಇದರಿಂದ ಇಲ್ಲಿನ ಗಿರಿಜನರು ಕಷ್ಟದ ನಡುವೆ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಅರಣ್ಯ ಹಕ್ಕು ಕಾಯ್ದೆಯಡಿ ಜಮೀನು ಹಕ್ಕುಪತ್ರವನ್ನು ನೀಡಲಾಗಿದೆ. ಆದರೆ ಪಹಣಿಪತ್ರ (ಆರ್‌ಟಿಸಿ) ನೀಡಿಲ್ಲ. ಇದರಿಂದ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪರಿಣಾಮ ಸಮರ್ಪಕವಾಗಿ ಕೃಷಿ ಮಾಡಲು ತೊಡುಕಾಗಿ ಪರಿಣಮಿಸಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಸಮಸ್ಯೆಗಳ ನಿವಾರಣೆಗೆ ಮುಂದಾಗಬೇಕು ಎಂದು ತಿಳಿಸಿದರು.


    ಬುಡಕಟ್ಟು ಸಮುದಾಯವು ಅಭಿವೃದ್ದಿ ಹೊಂದುವ ಸಲುವಾಗಿ ಸಮತಾ ಹಾಗೂ ಏಟ್ರಿ ಸಂಸ್ಥೆಯು ಎಸ್ಸೆಸ್ಸೆಲ್ಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನವನ್ನು ನೀಡುತ್ತಿರುವುದು ಮೆಚ್ಚುಗೆಯ ಸಂಗತಿ. ಆದ್ದರಿಂದ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ಇದರಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದರು.


    ಇದೇ ವೇಳೆ 21 ಬುಡಕಟ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ತಾಲೂಕು ಅಭಿವೃದ್ಧಿ ಸಂಘದ ಅಧ್ಯಕ್ಷ ದೊಡ್ಡಸಿದ್ದ, ಕಾರ್ಯದರ್ಶಿ ರಂಗೇಗೌಡ, ಜಿಲ್ಲಾ ಉಪಾಧ್ಯಕ್ಷ ಯು.ರಂಗೇಗೌಡ, ಮುಖಂಡರಾದ ಮಾದೇಗೌಡ, ಗಿರಿಯಾ, ಕೇತೇಗೌಡ, ನಾಗಣ್ಣ, ಭದ್ರೇಗೌಡ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts