ಗುಂಬಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಳ್ಳತನ

16 yelandur 02
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದ ಸ್ಥಳಕ್ಕೆ ಶ್ವಾನದಳದ ಸಿಬ್ಬಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿತು.
Published on

ಯಳಂದೂರು: ತಾಲೂಕಿನ ಗುಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಸಾವಿರಾರು ರೂ.ಮೌಲ್ಯದ ವಸ್ತುಗಳ ಕಳ್ಳತನವಾಗಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಜೂ.8 ರಂದು ಕಳ್ಳರು ಶಾಲೆಯ ಬಾಗಿಲಿನ ಬೀಗಗಳನ್ನು ಒಡೆದು ಶಾಲೆಯಲ್ಲಿದ್ದ 2 ಕಂಪ್ಯೂಟರ್, 2 ಪ್ರಾಜೆಕ್ಟರ್, ಸ್ಪೀಕರ್, ಯುಪಿಎಸ್ ಬ್ಯಾಟರಿ ಸೇರಿದಂತೆ ವಿವಿಧ ವಸ್ತುಗಳನ್ನು ಕದ್ದೊಯ್ದಿದ್ದಾರೆ.

ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕಿ ಪುಟ್ಟನಂಜಮ್ಮ ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಶ್ವಾನದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net