More

    ಗುಡುಗು ಮಿಂಚಿನೊಂದಿಗೆ ಉತ್ತಮ ಮಳೆ ಸಾಧ್ಯತೆ

    ಮಂಗಳೂರು: ದ.ಕ, ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬೆಳಗಗಿನಿಂದ ಮಧ್ಯಾಹ್ನದ ವರೆಗೆ ಉತ್ತಮ ಬಿಸಿಲಿನ ವಾತಾವರಣವಿದ್ದು ಸಂಜೆ ಮೋಡಕವಿದ ವಾತಾವರನ ಇತ್ತು. ರಾಷ್ಟ್ರೀಯ ಹವಾಮಾನ ಮನ್ಸೂಚನಾ ಕೇಂದ್ರದ ಮಾಹಿತಿಯಂತೆ ಮುಂದಿನ 2 ದಿನ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

    ದ.ಕ ಜಿಲ್ಲೆಯಲ್ಲಿ ಬುಧವಾರ ಸರಾಸರಿ 38.1 ಡಿಗ್ರಿ ಗರಿಷ್ಟ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಸಂಜೆ 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಠಾಂಶ ದಾಖಲಾಗಿರುವುದರಿಂದ ರಾತ್ರಿ ಪೂರಾ ಒಣ ಚಳಿ ಮುಂದುವರಿದಿತ್ತು. ದ.ಕ, ಉಡುಪಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಸರಾಸರಿ 38.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಸಂಜೆ ಸುಬ್ರಹ್ಮಣ್ಯ, ಅರಂತೋಡು, ಸುಳ್ಯ ಭಾಗದಲ್ಲಿ ಮಳೆಯಾಗಿದೆ. ರಾತ್ರಿ ಮಳೆ ಕಾಡು ಹಾಗು ಪಶ್ಚಿಮಘಟ್ಟದ ಹಲವಡೆ ಹೆಚ್ಚಿನ ಪ್ರಮಾಣದ ಮೋಡಕವಿದ ವಾತಾವರಣ ಕಂಡುಬಂದಿದೆ.

    *ಆಲಿಕಲ್ಲು ಮಳೆ

    ಅರಬ್ಬಿ ಸಮುದ್ರದಲ್ಲಿ ಗಾಳಿಯ ಪ್ರಮಾಣ ತುಸು ಹೆಚ್ಚಾದ ಕಾರಣ ಉಡುಪಿ, ಕಾರವಾರ ಬೀಚ್ ವ್ಯಾಪ್ತಿಯಲ್ಲೂ ಕಡಲಬ್ಬರ ಹೆಚ್ಚಳಗೊಳ್ಳುತ್ತಿದೆ.ಮುಂದಿನ 1-2 ದಿನ ರಾತ್ರಿ ವೇಳೆ ಚಳಿಯ ತೀವ್ರತೆ ಸಾಧಾರಣಕ್ಕಿಂತ ತುಸು ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಜೊತೆಗೆ ಆಲಿಕಲ್ಲು ಮಳೆ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಹವಾಮಾನ ಮನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts