More

    ಗುಣಮಟ್ಟದ ಕಾಮಗಾರಿಗೆ ಕೈಗೊಳ್ಳಿ

    ಮುದ್ದೇಬಿಹಾಳ: ಮನೆಗಳನ್ನು ಕಳಪೆಮಟ್ಟದಲ್ಲಿ ನಿರ್ಮಿಸಿದರೆ ನನ್ನ ಹೆಸರು ಕೆಡುತ್ತದೆ. ಗುಣಮಟ್ಟದ ಕಾಮಗಾರಿ ಮಾಡಿಸುವಂತೆ ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಅಧಿಕಾರಿಗಳಿಗೆ ಸೂಚಿಸಿದರು.

    ಪಟ್ಟಣದ ಹಡಲಗೇರಿ ರಸ್ತೆಯಲ್ಲಿ ಸ್ಲಂ ಬೋರ್ಡ್‌ನಿಂದ ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಸೋಮವಾರ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದರು.

    ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣ ಕಳಪೆ ಮಟ್ಟದಲ್ಲಿ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಬಂದಿದ್ದು ಎಂ. ಸ್ಯಾಂಡ್ ಬಳಸದಂತೆ ಗುತ್ತಿಗೆದಾರರಿಗೆ ತಿಳಿಸಿದ್ದರೂ ಅದನ್ನು ನಿರ್ಲಕ್ಷಿಸಿ ಕಾಮಗಾರಿ ಮಾಡುತ್ತಿರುವುದು ಸರಿಯಲ್ಲ ಎಂದು ಹರಿಹಾಯ್ದರು.

    ಶಾಸಕರಿಗೆ ಪುರಸಭೆ ಮುಖ್ಯಾಧಿಕಾರಿ ಕೆ.ಎಂ. ಖಿಲಾರಿ ಮಾಹಿತಿ ನೀಡಿ, ಒಟ್ಟು 350 ಮನೆಗಳನ್ನು ನಿರ್ಮಿಸಬೇಕಾಗಿದ್ದು ಸದ್ಯಕ್ಕೆ 130 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಸಾಮಾನ್ಯ ವರ್ಗದವರಿಂದ 1.10 ಲಕ್ಷ ರೂ., ಎಸ್ಸಿ, ಎಸ್ಟಿ ವರ್ಗದವರಿಂದ 80 ಸಾವಿರ ರೂ.ಫಲಾನುಭವಿಗಳ ವಂತಿಕೆ ಸೇರಿ ಒಟ್ಟು ಐದು ಲಕ್ಷ ರೂ.ಗಳಲ್ಲಿ ಮನೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಬಾಕಿ 220 ಮನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಿದೆ ಎಂದರು.

    ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವಂತೆ ಶಾಸಕ ನಾಡಗೌಡ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅಲ್ಲದೇ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಲು ತಿಳಿಸಿದರು.

    ಹಳೇ ತರಕಾರಿ ಮಾರುಕಟ್ಟೆ ತೆರವು ಪರಿಶೀಲನೆ
    ಪಟ್ಟಣದ ಹೃದಯಭಾಗದಲ್ಲಿರುವ ಹಳೇ ತರಕಾರಿ ಮಾರುಕಟ್ಟೆಯನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಸೋಮವಾರ ಸಂಜೆ ಪರಿಶೀಲನೆ ನಡೆಸಿದರು. ಈಗಾಗಲೇ ಮಾರುಕಟ್ಟೆ ತೆರವು ಕಾರ್ಯ ಈಗಾಗಲೇ ಪ್ರಗತಿಯಲ್ಲಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಮಾರುಕಟ್ಟೆ ಜಾಗೆ ಎಷ್ಟು ಲಭ್ಯವಾಗುತ್ತದೆಯೋ ಅದನ್ನು ಗಮನಿಸಿಕೊಂಡು ಮೆಗಾ ಮಾರ್ಕೆಟ್ ನಿರ್ಮಿಸಲು ಅಗತ್ಯ ನೀಲನಕ್ಷೆಯನ್ನು ತಯಾರಿಸುವಂತೆ ಹಾಗೂ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸಿ.ಬಿ. ಅಸ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಗಫೂರ ಮಕಾನದಾರ, ಬಾಪುಗೌಡ ಪೀರಾಪೂರ, ಪುರಸಭೆ ಮುಖ್ಯಾಧಿಕಾರಿ ಕೆ.ಎಂ. ಖಿಲಾರಿ,ಪುರಸಭೆ ಸದಸ್ಯರಾದ ವೀರೇಶ ಹಡಲಗೇರಿ, ಶಿವು ಶಿವಪೂರ, ಮಹೆಬೂಬ ಗೊಳಸಂಗಿ, ಸಂಗನಗೌಡ ಪಾಟೀಲ್, ಲಕ್ಷ್ಮಣ ಲಮಾಣಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts