More

    ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ

    ಚಿತ್ರದುರ್ಗ: ಹಿಂದಿನ ವರ್ಷ ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿತ್ತು. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ, ಉನ್ನತ ಸ್ಥಾನ ಗಳಿಸಲು ಈ ಬಾರಿಯು ಶಿಕ್ಷಕರು ಹೆಚ್ಚಿನ ಶ್ರಮ ಹಾಕಬೇಕು ಎಂದು ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಸಲಹೆ ನೀಡಿದರು.

    ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮತ್ತು ತಾಲೂಕು ಸಮಾಜ ವಿಜ್ಞಾನ ಶಿಕ್ಷಕರ ಕ್ಲಬ್‌ನಿಂದ ತರಾಸು ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಸಮಾಜ ವಿಜ್ಞಾನ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಸ್ಪರ್ಧಾತ್ಮಕ ಪರೀಕ್ಷೆಗಳ ಮಾದರಿಯಲ್ಲೇ ಜಿಲ್ಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು. ವಿದ್ಯಾರ್ಥಿಗಳು ಪ್ರತಿಯೊಂದು ವಿಷಯದಲ್ಲೂ ಸಂಪೂರ್ಣ ಹಿಡಿತ ಹೊಂದುವಂತೆ ಬೋಧಿಸಿ. ಅಲ್ಲದೆ, ಮುಖ್ಯವೆನಿಸುವ ಪಠ್ಯಗಳಿಗೆ ಒತ್ತು ಕೊಟ್ಟು ತಯಾರು ಮಾಡಬೇಕು ಎಂದು ಶಿಕ್ಷಕರಿಗೆ ಸೂಚಿಸಿದರು.

    ಬಿಇಒ ನಾಗಭೂಷಣ್ ಮಾತನಾಡಿ, ಆರು ವಿಷಯದಲ್ಲಿ ಸಮಾಜ ವಿಜ್ಞಾನ ಪ್ರಮುಖವಾಗಿದೆ. ಸರ್ಕಾರಿ ಶಾಲೆಯ ಮಕ್ಕಳು ಉತ್ತಮ ಫಲಿತಾಂಶ ತರುವಂತೆ ಶಿಕ್ಷಕರು ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

    ಬೆಂಗಳೂರಿನ ಸರ್ಕಾರಿ ಫ್ರೌಢಶಾಲೆ ಸಹ ಶಿಕ್ಷಕ ವಸಂತ್‌ಶೆಟ್ಟಿ, ಶಾರದಾ ಪಬ್ಲಿಕ್ ಸ್ಕೂಲ್ನ ಎಂ.ಪ್ರಸಾದ್ ತರಬೇತಿ ನೀಡಿದರು. ಸಮಗ್ರ ಶಿಕ್ಷಣ ಇಲಾಖೆ ಅಧಿಕಾರಿ ಸಿ.ಎಸ್.ವೆಂಕಟೇಶ್, ವಿವಿಧ ವಿಷಯಗಳ ಪರಿವೀಕ್ಷಕರಾದ ಚಂದ್ರಣ್ಣ, ಸವಿತಾ, ಶಿವಣ್ಣ, ಸಹ ಶಿಕ್ಷಕ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts