More

    ಗುಣಮಟ್ಟದ ಶಿಕ್ಷಣ ಸೌಲಭ್ಯ ಸದ್ಬಳಕೆಯಾಗಲಿ

    ಕೆ.ಎಂ.ದೊಡ್ಡಿ: ಸ್ಪರ್ಧಾತ್ಮಕ ಪೈಪೊಟಿಯ ನಡುವೆಯೂ ಒಂದೇ ಕ್ಯಾಂಪಸ್‌ನಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್‌ನಿಂದ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಎಂದು ವಿಧಾನ ಪರಿಷತ್ ಸದಸ್ಯ, ಬಿಇಟಿ ಟ್ರಸ್ಟ್ ಅಧ್ಯಕ್ಷ ಮಧು ಜಿ. ಮಾದೇಗೌಡ ಸಲಹೆ ನೀಡಿದರು.

    ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಭಾರತೀ ಸ್ಕೂಲ್ ಆಫ್ ಎಕ್ಸ್‌ಲೆನ್ಸ್ ಮತ್ತು ಡಾ.ಜಿ.ಮಾದೇಗೌಡ ಕಾಲೇಜ್ ಆಫ್ ಎಕ್ಸ್‌ಲೆನ್ಸ್ ವತಿಯಿಂದ ಪ್ರಥಮ ವಿದ್ಯಾರ್ಥಿಗಳಿಗೆ ಸ್ವಾಗತ, ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು 2023 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಗುರುವಾರ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ನನ್ನ ತಂದೆ ಜಿ.ಮಾದೇಗೌಡರ ಕನಸಿನಂತೆ ಹಳ್ಳಿಗಾಡಿನ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತಿದ್ದೇನೆ. ಹಳ್ಳಿಗಾಡಿನ ಮಕ್ಕಳ ಭವಿಷ್ಯ ರೂಪಿಸಲು ಭಾರತೀ ವಿದ್ಯಾಸಂಸ್ಥೆ ಕಟ್ಟಿದ್ದು ಅವರ ಆಸೆಯಂತೆ ಸಂಸ್ಥೆ ನಡೆಸಿ ಕೊಂಡು ಬರುತಿದ್ದೇವೆ. ಉತ್ತಮ ಶಿಕ್ಷಕರ ತಂಡ ಕಟ್ಟಿಕೊಂಡು ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತಿದ್ದೇನೆ ಎಂದರು.
    ಭಾರತೀ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ಮಾತನಾಡಿ, ಚಿಕ್ಕಂದಿನಿಂದಲೇ ಕಷ್ಟಪಟ್ಟು ಓದಿದರೆ ತಾವು ಅಂದುಕೊಂಡಿರುವ ಗುರಿಯನ್ನು ಸುಲಭವಾಗಿ ತಲುಪಬಹುದಾಗಿದೆ. ಉದ್ಯೋಗದ ಅವಕಾಶಗಳು ಸಾಕಷ್ಟಿವೆ. ಭಾರತೀ ಕಾಲೇಜಿನಲ್ಲಿ ಓದಿರುವ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉದ್ಯೋಗದಲ್ಲಿರುವುದು ಹೆಮ್ಮೆಯ ವಿಷಯ ಎಂದರು.

    ಮಧು ಜಿ.ಮಾದೇಗೌಡ ಅವರು ನಮ್ಮ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಐಎಎಸ್ ಮಾಡುವ ವಿದ್ಯಾರ್ಥಿಗಳ ತರಬೇತಿಯ ಖರ್ಚನ್ನು ಅವರೇ ಭರಿಸುತಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು.
    ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

    ಕಾಲೇಜಿನ ಪ್ರಾಂಶುಪಾಲ ಸಿ.ವಿ.ಮಲ್ಲಿಕಾರ್ಜುನ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್. ರೇವಣ್ಣ, ಉಪನ್ಯಾಸಕರಾದ ವೇದಮೂರ್ತಿ, ಪುಟ್ಟಸ್ವಾಮಿ, ಕುಮಾರಸ್ವಾಮಿ, ಅನಿತಾ, ಅನುರಾಧಾ, ಆನಂದ್, ಬಸವರಾಜು, ಪ್ರಗತಿ, ಶಿಕ್ಷಕಿಯರಾದ ಇಂದ್ರಾಣಿ, ಗಾಯತ್ರಿ, ತಾರಾ, ಪರಮೇಶ್ ಸೇರಿದಂತೆ ಹಲವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts