More

    ಗುಣಮಟ್ಟದ ಹಾಲು ಪೂರೈಕೆ ಮಾಡಿ

    ಮಳವಳ್ಳಿ: ಗುಣಮಟ್ಟದ ಹಾಲು ಪೂರೈಕೆ ಮಾಡುವುದರಿಂದ ಉತ್ಪಾದಕರು ಮತ್ತು ಸಹಕಾರ ಸಂಘಗಳು ಆರ್ಥಿಕವಾಗಿ ಸದೃಢಗೊಳ್ಳಲು ನೆರವಾಗುತ್ತದೆ ಎಂದು ಮನ್‌ಮುಲ್ ತಾಲೂಕು ಪ್ರಭಾರ ಸಹಾಯಕ ವ್ಯವಸ್ಥಾಪಕ ಮಧುಶಂಕರ್ ಹೇಳಿದರು.
    ತಾಲೂಕಿನ ರಾಗಿಬೊಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಕೃಷಿಕರು ಜೀವನ ನಿರ್ವಹಣೆಗಾಗಿ ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ. ಕೆಲವು ರೈತರು ದೊಡ್ಡ ಮಟ್ಟದಲ್ಲಿ ಹೈನೋದ್ಯಮವನ್ನು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಹಾಲಿನ ಗುಣಮಟ್ಟ ಪಾಲನೆಗೆ ಆದ್ಯತೆ ಕೊಡಬೇಕು ಎಂದರು.
    ಸಂಘದ ಕಾರ್ಯದರ್ಶಿ ಶಿವಪ್ರಕಾಶ್ ವಾರ್ಷಿಕ ವರದಿಯನ್ನು ಮಂಡಿಸಿ ಮಾತನಾಡಿ, 2022-23 ನೇ ಸಾಲಿನಲ್ಲಿ ಸಂಘ 11,64,186 ಲಕ್ಷ ರೂ. ನಿವ್ವಳ ಆದಾಯ ಗಳಿಸಿದೆ ಎಂದರು.
    ಸನ್ಮಾನ: ಸಂಘಕ್ಕೆ ಪ್ರಸ್ತುತ ಸಾಲಿನಲ್ಲಿ ಅತಿ ಹೆಚ್ಚು ಹಾಲು ಪೂರೈಸಿದ ನಿಂಗರಾಜು, ಮಹದೇವಸ್ವಾಮಿ, ಪ್ರವೀಣ್ ಕುಮಾರ್ ಮತ್ತು ಗುಣಮಟ್ಟದ ಹಾಲು ಸರಬರಾಜು ಮಾಡಿದ ಪಂಡಿತಾರಾಧ್ಯ, ಶಿವಸ್ವಾಮಿ , ಪ್ರಭುಸ್ವಾಮಿ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
    ಸಂಘದ ಅಧ್ಯಕ್ಷ ನಿಂಗರಾಜು, ಉಪಾಧ್ಯಕ್ಷೆ ಸುಶೀಲಾ, ಒಕ್ಕೂಟದ ಪಶು ವೈದ್ಯಾಧಿಕಾರಿ ಡಾ.ಚೌಡೇಗೌಡ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts