More

    ಗುಣ ಹೊಂದಿದ 116 ಜನ

    ಕಾರವಾರ: ಜಿಲ್ಲೆಯಲ್ಲಿ ಶುಕ್ರವಾರ 75 ಜನರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದೆ. 116 ಜನ ಗುಣ ಹೊಂದಿ ಬಿಡುಗಡೆಯಾಗಿದ್ದಾರೆ. ಕಾರವಾರದಲ್ಲಿ 5, ಶಿರಸಿಯಲ್ಲಿ 21, ಹಳಿಯಾಳ, ದಾಂಡೇಲಿಯಲ್ಲಿ 37, ಮುಂಡಗೋಡ ಮತ್ತು ಕುಮಟಾದಲ್ಲಿ 3, ಅಂಕೋಲಾದಲ್ಲಿ 4, ಯಲ್ಲಾಪುರ ಮತ್ತು ಭಟ್ಕಳದಲ್ಲಿ ತಲಾ ಒಬ್ಬರಲ್ಲಿ ವೈರಸ್ ಕಾಣಿಸಿಕೊಂಡಿದೆ. ಭಟ್ಕಳ ಮೂಲದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

    ಕಾರವಾರದಲ್ಲಿ 23, ಹೊನ್ನಾವರದಲ್ಲಿ 1, ಭಟ್ಕಳದಲ್ಲಿ 16, ಮುಂಡಗೋಡಿನಲ್ಲಿ 6, ಹಳಿಯಾಳ ಮತ್ತು ದಾಂಡೇಲಿಯಲ್ಲಿ 65, ಜೊಯಿಡಾದಲ್ಲಿ 5 ಜನರು ಗುಣಹೊಂದಿ ಬಿಡುಗಡೆಯಾಗಿದ್ದಾರೆ.

    ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಮುಂಡಗೋಡ: ಕರೊನಾ ಪರೀಕ್ಷೆಯ ಕುರಿತು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಮುಲಾಜಿಲ್ಲದೇ ಪ್ರಕರಣ ದಾಖಲಿಸಲಾಗುವುದು ಎಂದು ಶಿರಸಿ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ ಎಚ್ಚರಿಕೆ ನೀಡಿದರು.

    ಪಟ್ಟಣದ ಮಿನಿ ವಿಧಾನಸೌಧದ ಸಭಾಭವನದಲ್ಲಿ ಶುಕ್ರವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ತಾಲೂಕು ವೈದ್ಯಾಧಿಕಾರಿ ಮತ್ತು ತಹಸೀಲ್ದಾರ್ ಅವರಿಂದ ನನಗೆ ಈ ವಿಷಯ ತಿಳಿದು ಬಂದಿದೆ. ಬರುವ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆ, ಬಿಪಿ, ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ, 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಕಡೆಯಿಂದ ಬಂದವರಿಗೆ ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಲಾಗುವುದು ಎಂದರು.

    ತಹಸೀಲ್ದಾರ್ ಶ್ರೀಧರ ಮುಂದಲಮನಿ ಮಾತನಾಡಿ, ತಾಲೂಕಿನಲ್ಲಿ ಈವರೆಗೂ ಕರೊನಾ ಸೋಂಕು ಸಮುದಾಯಕ್ಕೆ ಹರಡಿಲ್ಲ. ಕೋವಿಡ್ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆಯಲಿಚ್ಛಿಸದ ಸೋಂಕಿತಂರು ಹೋಂ ಐಸೋಲೇಷನ್​ನಲ್ಲಿ ಚಿಕಿತ್ಸೆ ಪಡೆಯಬಹುದು. ಅವರಿಗೆ ಬೇಕಾದ ಪೌಷ್ಟಿಕ ಆಹಾರ ಪೂರೈಸಲಾಗುವುದು. ಕೆಮ್ಮು, ನೆಗಡಿ ಮತ್ತು ಜ್ವರದ ಲಕ್ಷಣಗಳು ಕಂಡು ಬಂದರೆ ಕೂಡಲೆ ಸ್ವಯಂ-ಪ್ರೇರಣೆಯಿಂದ ಪರೀಕ್ಷೆ ಮಾಡಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts