More

    ಗುತ್ತಿಗೆ ಸಿಬ್ಬಂದಿಗೆ ಸೇವಾ ಭದ್ರತೆ ನೀಡಿ

    ಬೆಳಗಾವಿ: ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳ ‘ಡಿ’ ವರ್ಗದ ಹೊರಗುತ್ತಿಗೆ ನೌಕರರಿಗೆ ಬಾಕಿಯಿರುವ ವೇತನ ಮತ್ತು ಸೇವೆಯಿಂದ ಬಿಡುಗಡೆಗೊಳಿಸಲಾದ ಹೊರ ಸಂಪನ್ಮೂಲ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಒದಗಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಗುರುವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ರಾಜ್ಯದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ, ವಸತಿ ಶಾಲೆಗಳಲ್ಲಿ ಡಿ ವರ್ಗ ಸಿಬ್ಬಂದಿಗೆ ಕಳೆದ ಕೆಲವು ತಿಂಗಳಿನಿಂದ ವೇತನ ಬಾಕಿಯಿದೆ. ಇದರಿಂದ ನೌಕರರಿಗೆ ಬದುಕು ನಡೆಸುವುದು ಕಷ್ಟಕರವಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ವೇತನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರಾಜ್ಯದ ಇತರೆ ಜಿಲ್ಲೆಗಳಲ್ಲಿ ಹಾಸ್ಟೆಲ್ಗಳಿಗೆ ಪೂರೈಸುವ ಆಹಾರ ಸಾಮಗ್ರಿಗಳ ಟೆಂಡರ್‌ನಲ್ಲಿ ಭಾರಿ ಅವ್ಯಹಾರ ನಡೆದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಅವ್ಯವಹಾರದಲ್ಲಿ ಭಾಗಿಯಾದ ಅಧಿಕಾರಿಗಳಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹೊರಸಂಪನ್ಮೂಲ ಸಿಬ್ಬಂದಿಗೆ ಬಾಕಿ ವೇತನ ಮತ್ತು ಲಾಕ್‌ಡೌನ್ ಅವಧಿಯ ವೇತನ ಕೂಡಲೇ ನೀಡಬೇಕು. ಸಿಬ್ಬಂದಿಗೆ ವಾರದ ರಜೆ ನೀಡಬೇಕು. ಇಎಸ್‌ಐ, ಫಿಎಫ್ ಹಣ ಹೊರಗುತ್ತಿಗೆ ನೌಕರರ ಖಾತೆಗೆ ಜಮೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಸಂಘದ ಅಧ್ಯಕ್ಷ ನಿತ್ಯಾನಂದಸ್ವಾಮಿ, ಪ್ರಧಾನ ಕಾರ್ಯದರ್ಶಿ ಭೀಮಶೆಟ್ಟಿ ಯಂಪಳ್ಳಿ, ಕೆ.ಹನುಮೇಗೌಡ, ಇ.ಆರ್..ಯಲ್ಲಪ್ಪ, ಇಸಾಮೋದಿನ, ಹಲುಗಪ್ಪ ಚಲವಾದಿ, ಕೆ.ಮುನಿಯಪ್ಪ, ಪ್ರದೀಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts