More

    ಗೋಕರ್ಣಕ್ಕೆ ಸಮುದಾಯ ಆರೋಗ್ಯ ಕೇಂದ್ರದ ಭರವಸೆ

    ಗೋಕರ್ಣ: ಮುಂಬರುವ ಬಜೆಟ್​ನಲ್ಲಿ ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವ ಮಂಡಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ ಭರವಸೆ ನೀಡಿದರು.

    ಗೋಕರ್ಣದ ವಿವಿಧ ಭಾಗಗಳಿಗೆ ಸೋಮವಾರ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಶಾಸಕರ ಮನವಿಯಂತೆ ಗೋಕರ್ಣ ಹಾಗೂ ಕುಮಟಾ ತಾಲೂಕು ಆಸ್ಪತ್ರೆಗೆ ಅಗತ್ಯ ವ್ಯವಸ್ಥೆ ಕೈಗೊಳ್ಳಲು ವಿಶೇಷ ಅನುದಾನ ಮಂಜೂರು ಮಾಡಿಸಲು ಪ್ರಯತ್ನಿಸಲಾಗುವುದು ಎಂದರು.

    ಶಾಸಕ ದಿನಕರ ಶೆಟ್ಟಿ ಮಾತನಾಡಿ, ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರ ಹಲವು ವರ್ಷಗಳಿಂದ ಅನೇಕ ಕುಂದು ಕೊರತೆ ಎದುರಿಸುತ್ತಿದೆ. ಅವಘಡ ಮತ್ತು ಅಪಘಾತದ ಸಂದರ್ಭದಲ್ಲಿ ಪ್ರವಾಸಿಗರನ್ನು ತುರ್ತು ಚಿಕಿತ್ಸೆ ನೀಡಿ ಬದುಕಿಸಲು ಅತಿ ಅಗತ್ಯವಿರುವ ಯಾವ ವ್ಯವಸ್ಥೆಗಳೂ ಇಲ್ಲಿಲ್ಲ. ಹೀಗಾಗಿ ಪ್ರತಿ ವರ್ಷ 30ಕ್ಕೂ ಅಧಿಕ ಪ್ರವಾಸಿಗರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದರು.

    ಜಿಲ್ಲಾ ವೈದ್ಯಾಧಿಕಾರಿ ಡಾ. ಶರದ ನಾಯಕ, ತಾಲೂಕು ವೈದ್ಯಾಧಿಕಾರಿ ಡಾ. ಆಜ್ಞಾ ನಾಯಕ, ವೈದ್ಯಾಧಿಕಾರಿ ಡಾ. ಜಗದೀಶ ನಾಯ್ಕ, ತಹಸೀಲ್ದಾರ್ ಮೇಘರಾಜ ನಾಯ್ಕ, ಪಂಚಾಯಿತಿ ಅಧ್ಯಕ್ಷ ಮಂಜುನಾಥ ಜನ್ನು, ತಾಪಂ ಸದಸ್ಯ ಮಹೇಶ ಶೆಟ್ಟಿ, ರಾಜೇಶ ನಾಯಕ, ಹನೇಹಳ್ಳಿ ಗ್ರಾಪಂ ಅಧ್ಯಕ್ಷೆ ಭಾರತಿ ಗೌಡ, ಅರ್ಬನ್ ಬ್ಯಾಂಕ್ ಉಪಾಧ್ಯಕ್ಷ ರಾಮು ಕೆಂಚನ್ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts