More

    ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿಲ್ಲವೇಕೆ?

    ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈಗ ಅಧಿಕಾರದಲ್ಲಿದ್ದರೂ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿಲ್ಲವೇಕೆ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.

    ಬಿಜೆಪಿ ಮುಖಂಡರು ಕೇವಲ ಚುನಾವಣೆ ಸಂದರ್ಭ ಗೋಹತ್ಯೆ ನಿಷೇಧ ಕಾಯ್ದೆ, ರಾಮ ಜನ್ಮಭೂಮಿ, ಮಥುರಾ ಮುಂತಾದ ಧಾರ್ವಿುಕ ಸಂಗತಿಗಳನ್ನು ಮುನ್ನೆಲೆಗೆ ತರುತ್ತಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

    ರಾಜ್ಯದಲ್ಲಿ ಇನ್ನೂ 10 ವರ್ಷ ನಮ್ಮದೇ ಪಕ್ಷ ಆಡಳಿತದಲ್ಲಿ ಇರುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಸದನದಲ್ಲಿ ಹೇಳಿದ್ದಾರೆ. ಆದರೆ ಬಿಎಸ್​ವೈ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ನಾಯಕರು ಸಮಯ ನೋಡುತ್ತಿದ್ದಾರೆ. ಬಿಹಾರ ಚುನಾವಣೆ ಬಳಿಕ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುತ್ತಾರೆ ಎಂದರು.

    ಭೂ ಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ತಂದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬೇಳೂರು, ಈ ತೀರ್ಮಾನ ಕೈಗೊಳ್ಳುವ ಮೂಲಕ ಕಂದಾಯ ಸಚಿವ ಆರ್.ಅಶೋಕ್ ಕಾಪೋರೇಟ್ ಕಂಪನಿಗಳ ಕೈಗೊಂಬೆಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಿಜೆಪಿ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದರೂ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಘೊಷಣೆ ಮಾಡಿಲ್ಲ. ಸರ್ಕಾರದಲ್ಲಿ ಹಣವೇ ಇಲ್ಲ. ಅಧ್ಯಕ್ಷರು, ಉಪಾಧ್ಯಕ್ಷರ ನೇಮಕವಾದರೆ ಅಭಿವೃದ್ಧಿಗೆ ಅನುದಾನ ನೀಡಬೇಕೆಂಬ ಕಾರಣಕ್ಕೆ ಮೀಸಲಾತಿ ಘೊಷಿಸಿಲ್ಲ.

    ಬೇಳೂರು ಗೋಪಾಲಕೃಷ್ಣ, ಕೆಪಿಸಿಸಿ ವಕ್ತಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts