More

    ಗೋಬಿ ಮಂಜೂರಿಗೆ ಬಣ್ಣ ಹಾಕುವಂತಿಲ್ಲ

    ಚಿತ್ರದುರ್ಗ: ಬೀದಿ ಬದಿ ಗುಣಮಟ್ಟವಲ್ಲದ ಆಹಾರ ತಯಾರಿಸಿ ಮಾರಾಟ ಮಾಡುವುದು ನಿಯಮ ಬಾಹಿರವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ ಹೇಳಿದರು.
    ನಗರಸಭೆಯಲ್ಲಿ ಬುಧವಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕುರಿತಂತೆ ಬೀದಿ ಬದಿ ವ್ಯಾಪಾರಿಗಳಿಗೆ ಏರ್ಪಡಿಸಿದ್ದ ಜಾಗೃತಿ ಕಾರ‌್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬ ವ್ಯಾಪಾರಿಯೂ ಆಹಾರ ಸುರಕ್ಷತೆ ಕಾಯ್ದೆಯಡಿ ನೋಂದಣಿಯೊಂದಿಗೆ ಪರವಾನಗಿ ಪಡೆಯಬೇಕು. ತಪ್ಪಿದರೆ ಶಿಸ್ತು ಕ್ರಮ ಖಚಿತ ಎಂದು ಎಚ್ಚರಿಸಿದರು.
    ಗುಣಮಟ್ಟದಿಂದ ಕೂಡಿರದ ಆಹಾರ ಜನರ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ರಾಜ್ಯ ಸರ್ಕಾರ ಕೂಡ ಇತ್ತೀಚೆಗೆ ಗೋಬಿಮಂಚೂರಿಗೆ ಬಣ್ಣ ಹಾಕುವುದನ್ನು ನಿಷೇಧಿಸಿದೆ. ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗಉವುದು ಎಂದರು.
    ಜಿಲ್ಲೆಯಲ್ಲಿ ಆಹಾರ ತಯಾರಿಸಿ ನೀಡುವಂತಹ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಸ್ಥರು ಕೂಡ ಆಹಾರ ಸುರಕ್ಷತೆ ಕಾಯ್ದೆಯಡಿ ನೋಂದಣಿ ಹಾಗೂ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
    ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಪರಿಸರ ಅಭಿಯಂತರ ಜಾಫರ್, ಸಮುದಾಯ ಸಂಘಟಕ ಕೆಂಚಪ್ಪ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts