More

    ಗ್ರಾಪಂಗಳಿಂದಲೇ ನೀರಿನ ಘಟಕ ನಿರ್ವಹಿಸಿ

    ಬೆಳಗಾವಿ: ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯನ್ನು ಇನ್ನು ಮುಂದೆ ಆಯಾ ಗ್ರಾಮ ಪಂಚಾಯಿತಿಗಳಿಂದಲೇ ಮಾಡಬೇಕು. ಹೀಗಾಗಿ ಗ್ರಾಪಂ ಸಿಬ್ಬಂದಿಗೆ ಘಟಕಗಳ ನಿರ್ವಹಣೆ ಮತ್ತು ಕಾರ್ಯಚರಣೆ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ ಎಂದು ಖಾನಾಪುರ ತಾಪಂ ಇಒ ವೀರಣ್ಣಗೌಡ ಹೇಳಿದರು.

    ತಾಲೂಕು ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ
    ಬೆಳಗಾವಿ, ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಶುದ್ಧಕುಡಿಯುವ ನೀರಿನ ಘಟಕಗಳ ನಿರ್ವಹಣೆಯ ತರಬೇತಿ ಉದ್ದೇಶಿಸಿ ಅವರು ಮಾತನಾಡಿದರು.

    ಖಾನಾಪುರ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಾಟರ್‌ಮನ್, ಪಂಪ್ ಆಪರೇಟರಗಳು ತರಬೇತಿ ಶಿಬಿರದಲ್ಲಿ ತಮ್ಮ ಗೊಂದಲಗಳನ್ನು ನಿವಾರಿಸಿಕೊಂಡು, ಯಾವುದೇ ಅಚಾತುರ್ಯಗಳಿಗೆ ಅವಕಾಶ ನೀಡದಂತೆ ಘಟಕಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.

    ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಪ್ರವೀಣ ಮಠಪತಿ ಮಾತನಾಡಿ, ಜಲಜೀವನ ಮಿಷನ್ ಯೋಜನೆ, ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ತರಬೇತಿ ನೀಡಿ ಯೋಜನೆ ಅನುಷ್ಠಾನ ಮಾಡುವ ಕುರಿತು ಕಿಟ್ ಮೂಲಕ ಗ್ರಾಮ ಪಂಚಾಯಿತಿ ಹಂತದಲ್ಲಿ ನೀರು ಪರೀಕ್ಷೆಯ ಮಹತ್ವದ ಕುರಿತು ಮಾಹಿತಿ ನೀಡಿದರು.

    ನೀಲಮ್ಮ ಕಮತೆ ಜಲಜೀವನ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕಿ ನೀಲಮ್ಮ ಕಮತೆ ಸೇರಿದಂತೆ ತಾಲೂಕಿನ ವಿವಿಧ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts