More

    ಗ್ರಾಮಮಟ್ಟದಲ್ಲೇ ವಿವಾದ ಬಗೆಹರಿಸಿಕೊಳ್ಳಿ

    ವಿಜಯವಾಣಿ ಸುದ್ದಿಜಾಲ ಬೆಳಗಾವಿ
    ಗ್ರಾಮ ಮಟ್ಟದಲ್ಲಿಯೇ ವಿವಾದಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಪ್ರಯತ್ನಿಸಬೇಕು ಎಂದು ಬೆಳಗಾವಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎ.ವಿ. ಶ್ರೀನಾಥ ಸಲಹೆ ನೀಡಿದರು.
    ನಗರದ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜು, ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಉಚಿತ ಕಾನೂನು ನೆರವು ಶಿಬಿರದಲ್ಲಿ ಅವರು ಮಾತನಾಡಿದರು.
    6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಕಾತ್ಯಾಯಿನಿ ಮಾತನಾಡಿ, ಗ್ರಾಮದ ಜನರು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಶಿಕ್ಷಣದ ಮಹತ್ವ ವಿವರಿಸಿದರು.
    ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಗಣಪತಿ ಭಟ್ ಮಾತನಾಡಿ, ಸಣ್ಣಪುಟ್ಟ ಪ್ರಕರಣಗಳನ್ನು ಗ್ರಾಮ ಮಟ್ಟದಲ್ಲಿ ಬಗೆಹರಿಸುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು. ನ್ಯಾಯಾಲಯಗಳ ಪರಿಸ್ಥಿತಿ ಮತ್ತು ಸಮಾಜದಲ್ಲಿನ ಪ್ರಕರಣಗಳ ಬಗ್ಗೆ ಮಾತನಾಡಿದರು.
    ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಅಧಿಕಾರಿ ಪಿ.ಮುರಳಿ ಮೋಹನರೆಡ್ಡಿ ಮಾತನಾಡಿ, ಗ್ರಾಮಸ್ಥರು ಜಿಲ್ಲಾ ಕಾನೂನು ಸೇವೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
    ಅಧ್ಯಕ್ಷತೆ ವಹಿಸಿದ್ದ ಆರ್.ಎಲ್.ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ.ಎಚ್. ಹವಾಲ್ದಾರ ಮಾತನಾಡಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಗ್ರಾಮ ಅದಾಲತ್‌ನ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
    ಆರ್.ಎಲ್. ಮಹಾವಿದ್ಯಾಲಯದ ಕಾನೂನು ನೆರವು ಕೋಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಂಯೋಜಕ ಪ್ರೊ. ಚೇತನಕುಮಾರ್ ಕಾರ್ಯಕ್ರಮ ಸಂಯೋಜಿಸಿದ್ದರು. ಲಕ್ಷ್ಮೀ ಪೂಜಾರ, ಶಿವಾನಂದ ಬಿಜ್ಜರಗಿ, ಕಾರ್ತಿಕ ರೆಡ್ಡಿ, ರುಚಾ ಅಷ್ಟಪುತ್ರೆ, ಶುಭಾಂಗಿ ಪಾಟೀಲ, ಸುಜೀತ್ ಕದಂ, ಅನಿಲ ಗಿಡಗೌಡರ, ಮಲ್ಲಿಕಾರ್ಜುನ ಪೂಜಾರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts