More

    ಗ್ರಾಮಲೆಕ್ಕಾಧಿಕಾರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ

    ಶಿಗ್ಗಾಂವಿ: ನೆರೆಗೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮತ್ತು ರೈತರ ಬೆಳೆ ನಷ್ಟ ಪರಿಹಾರ ವಿತರಣೆಯಲ್ಲಿ ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿದ ಗ್ರಾಮಲೆಕ್ಕಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ನೂತನ ತಹಸೀಲ್ದಾರ್ ಪ್ರಕಾಶ ಕುದರಿ ಹೇಳಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆ, ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ತಹಸೀಲ್ದಾರ್, ಗ್ರಾಮಲೆಕ್ಕಾಧಿಕಾರಿಗಳು, ವಾಲೀಕಾರರಿಂದಲೂ ತಪ್ಪಾಗಿದೆ. ಈ ಬಗ್ಗೆ ಪರಿಶೀಲನೆ ನಡೆದಿದೆ. ಸಮಗ್ರ ವರದಿ ಆಧರಿಸಿ ತಪ್ಪಿಸ್ಥ ಗ್ರಾಮಲೆಕ್ಕಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇನೆ ಎಂದರು.

    ದಾಖಲೆ ಪ್ರಕಾರ ತಾಲೂಕಿನಲ್ಲಿ 3916 ಮನೆಗಳು ಬಿದ್ದಿವೆ. ಆದರೆ, 190 ಮನೆಗಳ ವ್ಯತ್ಯಾಸ ಕಂಡುಬರುತ್ತಿದೆ. ಕೆಲ ಗ್ರಾ.ಪಂ. ವ್ಯಾಪ್ತಿಯಲ್ಲಿ 22 ಮನೆಗಳು ಬಿದ್ದಿಲ್ಲ. 9 ಜನ ಫಲಾನುಭವಿಗೆ ತಲಾ 1 ಲಕ್ಷ ರೂ. ಜಮೆಯಾಗಿದೆ. ಇನ್ನು 13 ಫಲಾನುಭವಿಗಳಿಗೆ ಹಣ ಬಂದಿಲ್ಲ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.

    ಗ್ರಾಮಲೆಕ್ಕಾಧಿಕಾರಿಗಳು, ವಾಲೀಕಾರ ಮಾಡಿದ ತಪ್ಪಿನಿಂದ ಜವಾಬ್ದಾರಿ ಸ್ಥಾನದಲ್ಲಿರುವ ತಹಸೀಲ್ದಾರರು ನುಣುಚಿಕೊಳ್ಳಲು ಸಾಧ್ಯವಿಲ್ಲ. ತಪ್ಪು ಮಾಡಿದವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವುದರ ಜತೆಗೆ ಗ್ರಾಮಲೆಕ್ಕಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಸಿದ್ಧತೆ ನಡೆಸಿದ್ದೇನೆ ಎಂದರು.

    ಸಾಮಾಜಿಕ ಭದ್ರತೆ ಯೋಜನೆಗಳು ಅರ್ಹರಿಗೆ ಮುಟ್ಟಿಸಬೇಕು. ಸಮಸ್ಯೆ ಇದ್ದಲ್ಲಿ ಸಾರ್ವಜನಿಕರು, ನೇರವಾಗಿ ತಮ್ಮನ್ನು ಭೇಟಿ ಮಾಡಿ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts