More

    ಗ್ರಾಮೀಣರ ಆರೋಗ್ಯ ರಕ್ಷಣೆಗೆ ಸಹಕರಿಸಿ, ಲಯನ್ಸ್ ಕ್ಲಬ್ ಜಿಲ್ಲಾ ಪ್ರಾದೇಶಿಕ ವಲಯ ಅಧ್ಯಕ್ಷ ರಮೇಶ್ ರೆಡ್ಡಿ ಮನವಿ

    ಸರ್ಜಾಪುರ: ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಸಾಮಾಜಿಕ ಸೇವಾ ಸಂಸ್ಥೆಗಳು ಮುಂದಾಗಬೇಕು ಎಂದು ಬೆಂಗಳೂರು ಲಯನ್ಸ್ ಕ್ಲಬ್ ಜಿಲ್ಲಾ ಪ್ರಾದೇಶಿಕ ವಲಯ ಅಧ್ಯಕ್ಷ ರಮೇಶ್ ರೆಡ್ಡಿ ತಿಳಿಸಿದರು.

    ಸರ್ಜಾಪುರ ಸಮೀಪದ ಹಂದೇನಹಳ್ಳಿಯಲ್ಲಿ ಲಯನ್ಸ್ ಕ್ಲಬ್ ಆಫ್ ಬೆಂಗಳೂರು, ವೇಣುಗೋಪಾಲ ಸಂಘ, ವೇಮನ ಯುವಕರ ಸಂಘ ಹಂದೇನಹಳ್ಳಿ ಮತ್ತು ಹಂದೇನಹಳ್ಳಿ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

    ಗ್ರಾಮಾಂತರ ಪ್ರದೇಶಗಳಲ್ಲಿ ಬಹುತೇಕರು ರೈತಾಪಿ ಸಮುದಾಯದವರಾಗಿದ್ದು, ಪ್ರತಿ ದಿನ ದುಡಿಮೆ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಬಿಡುವಿನ ವೇಳೆಯಲ್ಲೂ ಹೈನುಗಾರಿಕೆ, ಕುರಿ, ಕೋಳಿ ಸಾಕಣೆ, ತೋಟಗಾರಿಕೆ ಕೆಲಸಗಳಿಂದಾಗಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸುವುದಿಲ್ಲ. ಕೆಲವು ವೇಳೆ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಸೇವಾ ಸಂಸ್ಥೆಗಳು ಗ್ರಾಮಾಂತರ ಪ್ರದೇಶಗಳಲ್ಲಿ ಶಿಬಿರ ಆಯೋಜಿಸಿ ರೈತರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆ ಹಾಗೂ ಆರೋಗ್ಯದ ಅರಿವು ನೀಡಿದರೆ ಅನ್ನದಾತರ ಆರೋಗ್ಯ ಸದೃಢಗೊಳ್ಳುತ್ತದೆ ಎಂದರು.

    ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿನ್ನಸ್ವಾಮಿ ರೆಡ್ಡಿ ಮಾತನಾಡಿ, ಕರೊನಾದಂತಹ ಕಾಯಿಲೆಯಿಂದ ಗ್ರಾಮಾಂತರ ಪ್ರದೇಶದ ಜನರು ತತ್ತರಿಸಿದ್ದಾರೆ. ಭಯ ಹಾಗೂ ಆತಂಕಕ್ಕೆ ಒಳಗಾಗಿ ಆಸ್ಪತ್ರೆಗೆ ಹೋಗುವುದನ್ನೇ ಬಿಟ್ಟಿದ್ದಾರೆ. ದೊಡ್ಡ ಆಸ್ಪತ್ರೆಗೆ ಹೋಗಲು ಹಣದ ಕೊರತೆ ಇದೆ. ಗ್ರಾಮೀಣರ ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಲಯನ್ಸ್ ಸಂಸ್ಥೆ ಸಂಯುಕ್ತ ಆಶ್ರಮದಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.

    200ಕ್ಕೂ ಹೆಚ್ಚು ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಮಹಾತ್ಮಾ ವಿದ್ಯಾಲಯದ ಅಧ್ಯಕ್ಷ ಕಿಶೋರ್ ಶರ್ಮ, ಕಾರ್ಯದರ್ಶಿ ನಾಗರೆಡ್ಡಿ, ಮುಖಂಡರಾದ ಹರ್ಷ, ರಾಮಕೃಷ್ಣ ರೆಡ್ಡಿ , ರಾಘವೆಂದ್ರ, ಅಮರೇಶ್, ಭುವನ್, ಪ್ರಸನ್ನ ಕುಮಾರ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts