More

    ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಮಹಿಳೆಯರಲ್ಲಿ ಆರ್ಥಿಕ ಶಿಸ್ತು

    ಯಳಂದೂರು: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸ್ತ್ರೀಯರನ್ನು ಕೇಂದ್ರೀಕರಿಸಿ ಆರ್ಥಿಕ ಚಟುವಟಿಕೆ ಕೈಗೊಳ್ಳುವ ಮೂಲಕ ಮಹಿಳೆಯರಲ್ಲಿ ಶಿಸ್ತು ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಎನ್ ಮಹೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.


    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಕಂದಹಳ್ಳಿ ಗ್ರಾಮದ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕಂದಹಳ್ಳಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ ಹಾಗೂ ಸಾಧನಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.


    ಸಕಾಲದಲ್ಲಿ ಸರ್ಕಾರವೇ ನಿರ್ವಹಣೆ ಮಾಡಲು ಸಾಧ್ಯವಾಗದ್ದನ್ನು ಧರ್ಮಸ್ಥಳ ಸ್ವಯಂ ಸೇವಾ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ. ಕಡಿಮೆ ಬಡ್ಡಿ ದರದಲ್ಲಿ ವ್ಯವಸ್ಥಿತವಾಗಿ ಬದುಕು ಕಟ್ಟಿಕೊಳ್ಳುವಲ್ಲಿ ಉತ್ತಮ ಸೇವೆ ನೀಡುತ್ತಿದೆ. ಸ್ವಯಂ ಸ್ವಚ್ಛತೆ, ಕುಡಿತದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುತ್ತಿರುವುದು ಸಮಾಜದ ಮೇಲೆ ಸಂಸ್ಥಗೆ ಇರುವ ಕಾಳಜಿಯನ್ನು ಬಿಂಬಿಸುತ್ತದೆ ಎಂದರು.


    ಸಂಸ್ಥೆಯ ಜಿಲ್ಲಾ ನಿರ್ದೇಶಕಿ ಲತಾ ಬಂಗೇರ ಒಕ್ಕೂಟ ದಾಖಲಾತಿ ಹಸ್ತಾಂತರ ಮಾಡಿ ಮಾತನಾಡಿ, ಯೋಜನೆಯು ಜನರ ಸೇವೆಗೆ ಸದಾ ಸಿದ್ಧವಿದ್ದು, ನಿರಾಶ್ರಿತರಿಗೆ ನೀಡುವ ಮಾಸಾಶನ, ಮದ್ಯಪಾನದಿಂದ ಕುಟುಂಬದ ಮೇಲೆ ಬೀರುವ ಪರಿಣಾಮಗಳು ಹಾಗೂ ಯೋಜನೆಯ ಕಾರ್ಯಕ್ರಮಗಳು ಬಡ ಜನರಿಗೆ ತಲುಪಲು ಎಲ್ಲ ವಿಧದಲ್ಲಿಯೂ ನಿರಂತರವಾಗಿ ಕಾರ್ಯಕರ್ತರು ದುಡಿಯಬೇಕು. ಜನರ ಶಿಸ್ತುಬದ್ಧ ವ್ಯವಹಾರ, ವ್ಯಕ್ತಿತ್ವ, ಸಾಧನೆ, ಅಭಿವೃದ್ಧಿ ಕುರಿತು ಬಡ ಜನರಿಗೆ ಸಂಸ್ಥೆ ಅಶಾದಾಯಕವಾಗಿದೆ ಎಂದರು.


    ನೂತನ ಪದಾಧಿಕಾರಿಗಳಿಗೆ ದಾಖಲಾತಿ ಹಸ್ತಾಂತರಿಸಲಾಯಿತು ಹಾಗೂ ನಿಕಟಪೂರ್ವ ಒಕ್ಕೂಟದ ಪದಾಧಿಕಾರಿಗಳಿಗೆ ಸ್ಮರಣಿಕೆಯನ್ನು ನೀಡಲಾಯಿತು.


    ಯೋಜನಾಧಿಕಾರಿ ಎಂ.ಎಸ್.ಪ್ರವೀಣ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ದೇವಾಲಯದ ಸಮಿತಿ ಅಧ್ಯಕ್ಷ ಮಹೇಶ್, ಶಾಂತರಾಜು, ಕೃಷಿ ಮೇಲ್ವಿಚಾರಕ ಪ್ರವೀಣ್, ಮೇಲ್ವಿಚಾರಕಿ ನೇತ್ರಾವತಿ, ಲೋಹಿತ್, ಮಾದೇಶ್, ಸೋಮಣ್ಣ, ಮಂಜುನಾಥ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts