More

    ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಶಾಸಕ ಕುಮಾರ್ ಬಂಗಾರಪ್ಪ

    ಸೊರಬ: ಗ್ರಾಮೀಣ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.
    ಸೋಮವಾರ ತಾಲೂಕಿನ ಜಡೆ ಹೋಬಳಿಯ ಶ್ಯಾನುವಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಅವರು, ಕಳೆದ ಕೆಲ ದಶಕಗಳಿಂದ ಗ್ರಾಮೀಣ ಭಾಗದ ಜನರ ಬದುಕು ಬದಲಾಗುತ್ತಿದೆ. ಮನೆಗಳಲ್ಲಿ ಬೈಕ್ ಮತ್ತು ಕಾರುಗಳು ಸಾಮಾನ್ಯವಾಗುತ್ತಿವೆ. ರಸ್ತೆಗಳ ಅಭಿವೃದ್ಧಿ ಕಾರ್ಯದ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳ ನಿವಾಸಿಗಳು ಸಹಕಾರ ನೀಡಬೇಕು. ಗ್ರಾಮದಲ್ಲಿ 550 ಮೀಟರ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ತಲಗುಂದ, ಬಂಕಸಾಣ ಮತ್ತು ಜಡೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಇದರಿಂದ ಗ್ರಾಮಸ್ಥರಿಗೆ ಸಮಯ ಉಳಿತಾಯವಾಗಲಿದೆ. ಗ್ರಾಮದಲ್ಲಿ ಭಾರಿ ವಾಹನಗಳ ಒಡಾಟಕ್ಕೆ ಸಾಧ್ಯವಾದಷ್ಟು ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ರಸ್ತೆಗಳು ಬೇಗನೇ ಹಾಳಾಗುತ್ತವೆ ಎಂದರು.
    ಗ್ರಾಮದ ಕೆರೆಗಳಲ್ಲಿ ಸರ್ವಕಾಲಿಕವಾಗಿ ನೀರು ತುಂಬುವಂತೆ ಯೋಜನೆ ರೂಪಿಸಲಾಗಿದೆ. ಇದರಿಂದ ರೈತರು ಮೂರು ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ. ತಲಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳನ್ನು ಉನ್ನತೀಕರಣಗೊಳಿಸಲಾಗುತ್ತಿದೆ. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಕ್ಷಣದಲ್ಲಿಯೇ ಛಾವಣಿ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುವುದು. ತಾಪಂ ಅನುದಾನದಲ್ಲಿ ನೂತನ ಶಾಲಾ ಕೊಠಡಿ ನಿರ್ಮಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts