More

    ಗ್ರಾಮೀಣ ವಿದ್ಯಾರ್ಥಿಗಳ ಸಾಧನೆಗೆ ವಿಶೇಷ ಆದ್ಯತೆ

    ಬೆಟ್ಟದಪುರ: ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾಸಂಸ್ಥೆ ವಿಶೇಷ ಒತ್ತು ನೀಡುತ್ತಿದೆ ಎಂದು ಬೆಟ್ಟದಪುರ ಡಿಟಿಎಂಎನ್ ಸಮೂಹ ಶಿಕ್ಷಣ ಸಂಸ್ಥೆಗಳ ಖಜಾಂಚಿ ಪಿ.ರವಿ ತಿಳಿಸಿದರು.

    ಬೆಟ್ಟದಪುರದ ಡಿ.ತಮ್ಮಯ್ಯ ಸ್ಮಾರಕ ನವೋದಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ ವಸ್ತು ಪ್ರದರ್ಶನ ಹಾಗೂ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನೆಯೇ ಮೊದಲ ಪಾಠಶಾಲೆ ಎಂಬಂತೆ ಪಾಲಕರು ತಮ್ಮ ಮಕ್ಕಳಲ್ಲಿನ ವಿಶೇಷ ಕೌಶಲಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಸಂಸ್ಥೆಯು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವ ಜತೆಗೆ ವಿದ್ಯಾರ್ಥಿಗಳಲ್ಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಿ ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿದೆ. ಬೆಟ್ಟದಪುರದಲ್ಲಿ ಉತ್ತಮ ಶೈಕ್ಷಣಿಕ ಅಭಿವೃದ್ಧಿ ಹಿತದೃಷ್ಟಿಯಿಂದ ಸರೋಜಮ್ಮ ಅವರು ಶಾಲೆಗೆ ನಿವೇಶನ ದಾನ ನೀಡಿರುವುದು ಶ್ಲಾಘನೀಯ ಎಂದರು.

    ಸಂಸ್ಥೆಯಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಕನ್ನಡ, ಇಂಗ್ಲಿಷ್, ಹಿಂದಿ ಸಾಹಿತ್ಯ, ಕವಿಗಳ ಪರಿಚಯ, ವಿಜ್ಞಾನ ವಸ್ತು ಮಾದರಿಗಳ ಪ್ರದರ್ಶನ, ಕರ್ನಾಟಕದ ಐತಿಹಾಸಿಕ ಸ್ಥಳದ ಮಹತ್ವ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾದರಿಗಳನ್ನು ನಿರ್ಮಿಸಿ ಪ್ರದರ್ಶಿಸಿದರು. ಇದೇ ವೇಳೆ ಪುಟಾಣಿಗಳು ಶ್ರೀಕೃಷ್ಣ, ರಾಧೆ, ರುಕ್ಮಿಣಿ, ಅಕ್ಕಮಹಾದೇವಿ, ಬಸವಣ್ಣ ಸೇರಿದಂತೆ ಮಹನೀಯರ ವೇಷಭೂಷಣ ತೊಟ್ಟು ಗಮನ ಸೆಳೆದರು.

    ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಬೆಕ್ಕರೆ ಸತೀಶ್ ಆರಾಧ್ಯ, ನಿವೇಶನ ದಾನಿ ಸರೋಜಮ್ಮ, ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಶೈಲಾ, ಆಡಳಿತಾಧಿಕಾರಿ ಜೆ.ಸಿ.ನಟರಾಜು, ನಿರ್ದೇಶಕರಾದ ಕೆ.ಎಚ್ ವಿಜಯಕುಮಾರ್, ಕೃಷ್ಣಮೂರ್ತಿ, ಸಿ.ಟಿ ಗುರುದತ್ತ, ಎಲ್.ಬಿ.ಜ್ಞಾನಾನಂದ, ಎಸ್.ಸುಂದರೇಶ್, ಪ್ರಾಂಶುಪಾಲ ಸತೀಶ್, ಪ್ರೌಢಶಾಲಾ ಮುಖ್ಯಶಿಕ್ಷಕ ಮುರಳಿ ಕೃಷ್ಣ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜರಿನಾ ಖಾನಂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts