More

    ಗ್ರಾಮ ಆಡಳಿತ ಅಧಿಕಾರಿಗಳಿಗೆ ಟ್ಯಾಬ್

     ಚಿಕ್ಕಮಗಳೂರು: ಗ್ರಾಮ ಲೆಕ್ಕಾಧಿಕಾರಿಗಳನ್ನು ಈಗಾಗಲೇ ಗ್ರಾಮ ಆಡಳಿತ ಅಧಿಕಾರಿಗಳಾಗಿ ಹುದ್ದೆ ಬದಲಾಯಿಸಲಾಗಿದ್ದು ತ್ವರಿತಗತಿಯಲ್ಲಿ ಕೆಲಸ ಆಗಲು ಅವರಿಗೆ ಟ್ಯಾಬ್ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

    ನಗರದ ದಂಟರಮಕ್ಕಿ ಬಳಿ ನೂತನವಾಗಿ ನಿರ್ವಣಗೊಳ್ಳಲಿರುವ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಕಂಪ್ಯೂಟರಿಕರಣ ಗೊಳಿಸಲಾಗುತ್ತಿದೆ. ಈ ಸಂಬಂಧ ಪ್ರಾಥಮಿಕ ಹಂತದಲ್ಲಿ ರಾಜ್ಯದ ಆರು ತಾಲೂಕುಗಳಲ್ಲಿ ಪೈಲೆಟ್ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

    ಭೂ ದಾಖಲೆ, ಮನೆ, ನಿವೇಶನ ಈ ಎಲ್ಲ ದಾಖಲೆಗಳು ಜನರ ಕೈಗೆ ಕೂಡಲೇ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಕಡತಗಳನ್ನು ಸ್ಕಾ್ಯನ್ ಮಾಡಿ ಅಪ್ಲೋಡ್ ಮಾಡುವ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

    ಶಾಸಕ ಸಿ.ಟಿ. ರವಿ ಮಾತನಾಡಿ, ಈಗಿರುವ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ವಸ್ತು ಪ್ರದರ್ಶನ ಕೇಂದ್ರವನ್ನಾಗಿ ಬಳಸಿಕೊಳ್ಳಲಾಗುವುದು. ಜನರಿಗೆ ಸರ್ಕಾರಿ ಇಲಾಖೆಗಳು ಸಮೀಪವಾಗಬೇಕು ಎಂಬ ಉದ್ದೇಶದಿಂದ ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಣದ ಸಮೀಪದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಶಾಸಕರಾದ ಎಂ.ಪಿ. ಕುಮಾರಸ್ವಾಮಿ, ಬೆಳ್ಳಿ ಪ್ರಕಾಶ್, ಟಿ.ಡಿ.ರಾಜೇಗೌಡ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಡಿಎಫ್​ಒ ಎನ್.ಇ.ಕ್ರಾಂತಿ, ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಆನಂದ್, ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಜಿಪಂ ಸಿಇಒ ಜಿ.ಪ್ರಭು, ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಬಿ.ಟಿ. ಕಾಂತರಾಜ್, ಬಿ.ಎಚ್. ಗವಿರಂಗಪ್ಪ, ಉಪವಿಭಾಗಾಧಿಕಾರಿ ರಾಜೇಶ್ ಇದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts